ಭಾನುವಾರ, ಜುಲೈ 3, 2022
24 °C
ಮಾನವ, ನೈಸರ್ಗಿಕ ಸಂಪತ್ತು

ಅಗ್ರಸ್ಥಾನದಲ್ಲಿ ಕರ್ನಾಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಸ್ಥಿರ ಅಭಿವೃದ್ಧಿಗೆ ಅಗತ್ಯವಾಗಿರುವ ನಾಲ್ಕು ಪ್ರಮುಖ ಸಂಪನ್ಮೂಲಗಳ ಪೈಕಿ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲಗಳಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ.

ಪಬ್ಲಿಕ್‌ ಅಫೇರ್ಸ್‌ ಸೆಂಟರ್‌(ಪಿಎಸಿ) ಬಿಡುಗಡೆ ಮಾಡಿರುವ ಸಾರ್ವಜನಿಕ ಆಡಳಿತ ಸೂಚ್ಯಂಕ(ಪಿಎಐ) ವರದಿಯಲ್ಲಿ ಈ ಅಂಶಗಳಿವೆ. ನೈಸರ್ಗಿಕ, ಸಾಮಾಜಿಕ, ಆರ್ಥಿಕ ಹಾಗೂ ಮಾನವ ಸಂಪನ್ಮೂಲಗಳ ನಿರ್ವಹಣೆಯನ್ನು ಆಧರಿಸಿ ಸುಸ್ಥಿರ ಅಭಿವೃದ್ಧಿ ಕುರಿತು ವಿಶ್ಲೇಷಣೆ ಮಾಡಲಾಗುತ್ತದೆ. ಈ ಸಂಪನ್ಮೂಲಗಳನ್ನು ಅಭಿವೃದ್ಧಿಯ ನಾಲ್ಕು ಮಹಾಸ್ತಂಭಗಳು ಎಂದೇ ವ್ಯಾಖ್ಯಾನಿಸಲಾಗುತ್ತದೆ.

ಆದರೆ, ಸಾಮಾಜಿಕ ಸಂಪನ್ಮೂಲದ ವಿಚಾರದಲ್ಲಿ ರಾಜ್ಯವು 14ನೇ ಸ್ಥಾನದಲ್ಲಿದೆ. ಸಾಮಾಜಿಕ ಸಂಪನ್ಮೂಲಗಳ ಸೂಚ್ಯಂಕವನ್ನು ನಿರ್ಧರಿಸುವಾಗ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಕೈಗೊಂಡ ಕ್ರಮಗಳು, ಸಾಮಾಜಿಕ ಭದ್ರತೆ, ಅಪರಾಧ ಚಟುವಟಿಕೆ, ಕಾನೂನು ಸುವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮುಂತಾದ ಅಂಶಗಳನ್ನು ಪರಿಗಣಿಸಲಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಅಂಶಗಳಲ್ಲಿ ರಾಜ್ಯ ಹಿಂದುಳಿದಿದೆ.

ಆರ್ಥಿಕ ಸಂಪನ್ಮೂಲದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಮೂಲಸೌಕರ್ಯ, ಆರ್ಥಿಕ ನಿರ್ವಹಣೆ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ಪರಿಗಣಿಸಿ ಈ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ ಎಂದು ಪಿಎಸಿ ವರದಿಯಲ್ಲಿ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.