ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಬೆಳಿಗ್ಗೆ 5 ರಿಂದ ರಾತ್ರಿ 9 ಗಂಟೆಯೊಳಗೆ ಪಾರ್ಕ್‌ ತೆರೆಯಲು ಅವಕಾಶ

ಕಂಟೈನ್‌ಮೆಂಟ್‌ ವಲಯ ಹೊರತುಪಡಿಸಿ ಉಳಿದೆಡೆ ನಿರ್ಬಂಧ ಸಡಿಲಿಸಿ ರಾಜ್ಯ ಸರ್ಕಾರ ಆದೇಶ​
Last Updated 20 ಜೂನ್ 2020, 8:50 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯದಾದ್ಯಂತ ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ ಉಳಿದೆಡೆಗಳಲ್ಲಿ ಎಲ್ಲ ಉದ್ಯಾನವನಗಳನ್ನು (ಪಾರ್ಕ್‌ಗಳು) ಬೆಳಿಗ್ಗೆ 5 ರಿಂದ ರಾತ್ರಿ 9 ಗಂಟೆ ಅವಧಿಯ ಒಳಗೆ ತೆರೆಯುವ ಸಮಯವನ್ನು ಸ್ಥಳೀಯ ಮಹಾನಗರಪಾಲಿಕೆ, ಪಾಲಿಕೆಗಳು ನಿರ್ಧರಿಸಬಹುದು ಎಂದು ಆದೇಶ ಹೊರಡಿಸಿದೆ.

ಈ ಹಿಂದಿನ ಆದೇಶದ ಅನ್ವಯ, ಸದ್ಯ ಎಲ್ಲ ಪಾರ್ಕ್‌ಗಳನ್ನು ಬೆಳಿಗ್ಗೆ 7ರಿಂದ 9 ಗಂಟೆವರೆಗೆ ಮತ್ತು ಸಂಜೆ 4ರಿಂದ 7 ಗಂಟೆವರೆಗೆ ಸಾರ್ವಜನಿಕರಿಗಾಗಿ ತೆರೆಯಲಾಗುತ್ತಿದೆ. ಇನ್ನು ಮುಂದೆ, ಆಯಾ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಆದೇಶದಲ್ಲಿ ಸ್ಪಷ್ಟಡಿಸಲಾಗಿದೆ.

ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಲಾಕ್‌ಡೌನ್‌ ನಿರ್ಬಂಧಗಳನ್ನು ಜೂನ್‌ 30ರವರೆಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಮೇ 30ರಂದು ಹೊಸ ಮಾರ್ಗಸೂಚಿ ಹೊರಡಿಸಿತ್ತು. ಅದರ ಪ್ರಕಾರ, ಕಂಟೈನ್‌ಮೆಂಟ್‌ ವಲಯ ಅಲ್ಲದ ಕಡೆಗಳಲ್ಲಿ ಹಂತ ಹಂತವಾಗಿ ನಿಷೇಧಿತ ಚಟುವಟಿಕೆ ತೆರವುಗೊಳಿಸಲು ಲಾಕ್‌ಡೌನ್‌ ಸಡಿಲಿಕೆಯ (ಅನ್‌ಲಾಕ್‌ 1.0) ಹೊಸ ಮಾರ್ಗಸೂಚಿಯಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಅದರ ಅನ್ವಯ, ರಾಜ್ಯ ಸರ್ಕಾರ ಕೂಡಾ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪಾರ್ಕ್‌ಗಳನ್ನು ತೆರೆಯುವ ಸಮಯದ ಕುರಿತಂತೆ ನಿರ್ಬಂಧ ಸಡಿಲಿಸಲಾಗಿದೆ.

ಆದರೆ, ಕೋವಿಡ್‌ 19 ಹರಡುವಿಕೆ ನಿಯಂತ್ರಿಸುವ ಸಂಬಂಧ ಹೊರಡಿಸಿದ ಕೇಂದ್ರದ ನಿರ್ದೇಶನಗಳನ್ನು ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದೂ ಈ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT