ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಶುಕ್ರವಾರ, ಜೂಲೈ 19, 2019
24 °C

ವಿಧಾನಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ

Published:
Updated:

ಬೆಂಗಳೂರು: ಮುಂಗಾರ ಅಧಿವೇಶನದ ವಿಧಾನಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. 

ರಾಜ್ಯ ರಾಜಕಾರಣ ಮತ್ತೊಂದು ಮಹತ್ವದ ಘಟ್ಟಕ್ಕೆ ಬಂದಿದ್ದು ಶುಕ್ರವಾರದಂದು ಆರಂಭವಾದ ವಿಧಾನಸಭಾ ಕಲಾಪವನ್ನು ವಿಧಾನಸಭೆಯ ಸಭಾಧ್ಯಕ್ಷರು ಸೋಮವಾರಕ್ಕೆ ಮುಂದೂಡಿದರು. 

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದೇ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಮಂಡಿಸಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

‘ಇಂದು ಅನಿವಾರ್ಯವಾಗಿ ನಾನು ಈ ಮಾತು ಹೇಳ್ತಿದ್ದೀನಿ. ಸದನದ ಬೆಂಬಲ ಇದ್ದರೆ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ. ನಾನು ಸ್ವಪ್ರೇರಣೆಯಿಂದ ವಿಶ್ವಾಸಮತ ಮಂಡಿಸಲು ನಿರ್ಧರಿಸಿದ್ದೇನೆ. ನನಗೆ ಸಮಯ ಕೊಡಿ. ಅಂತ ಕೋರುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ, ಸಚಿವ ಡಿ.ಕೆ. ಶಿವಕುಮಾರ್‌ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಬಳಿಕ ಸದನದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು. 

ಬರಹ ಇಷ್ಟವಾಯಿತೆ?

 • 18

  Happy
 • 2

  Amused
 • 2

  Sad
 • 2

  Frustrated
 • 0

  Angry

Comments:

0 comments

Write the first review for this !