ಬುಧವಾರ, ಏಪ್ರಿಲ್ 1, 2020
19 °C

ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆನಂದ ಮಾಮನಿ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಬಿಜೆಪಿ ಶಾಸಕ ಆನಂದ ಮಾಮನಿ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆನಂದ ಮಾಮನಿ ಅವರು ಬೆಳಗಾವಿಯ ಸವದತ್ತಿ ಎಲ್ಲಮ್ಮ  ಕ್ಷೇತ್ರದಿಂದ ಸತತ ಮೂರನೇ ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ.

ಆನಂದ ಮಾಮನಿ ಅವರ ತಂದೆ ಚಂದ್ರಶೇಖರ ಮಾಮನಿ ಅವರು 1996_1999 ರ ಅವಧಿಯಲ್ಲಿ  ಉಪ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ರಾಜಿನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಇದೀಗ ಮಾಮನಿ ಅವರನ್ನು ನೇಮಕ ಮಾಡುವ ಮೂಲಕ ಆ ಸ್ಥಾನವನ್ನು ತುಂಬಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು