ಗುರುವಾರ , ಏಪ್ರಿಲ್ 9, 2020
19 °C

9 ಆನೆಗಳಿಗೆ ರೇಡಿಯೊ ಕಾಲರ್‌: ಆನಂದ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾನವ–ಪ್ರಾಣಿ ಸಂಘರ್ಷ ತಪ್ಪಿಸಲು ಒಂಬತ್ತು ಆನೆಗಳಿಗೆ ರೇಡಿಯೊ ಕಾಲರ್ ಅಳವಡಿಸಲಾಗಿದೆ. ಈ ಆನೆಗಳು ನಾಡಿನ ಹತ್ತಿರ ಬಂದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಜನರಿಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ಆನೆ ಕಾರಿಡಾರ್‌ ಕಿರಿದಾಗುತ್ತಿರುವುದರಿಂದ ಆನೆಗಳು ನಾಡಿಗೆ ನುಗ್ಗುತ್ತಿವೆ. ಗಣಿ ಬಾಧಿತ ಪ್ರದೇಶಗಳ ಪುನಶ್ಚೇತನ ಯೋಜನೆಯ ಹಣ ಬಳಸಿ ಜಾಗ ಖರೀದಿ ಮಾಡಿ ಕಾರಿಡಾರ್ ವ್ಯಾಪ್ತಿಯನ್ನು ಹಿಗ್ಗಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು