ಮಂಗಳವಾರ, ಏಪ್ರಿಲ್ 7, 2020
19 °C

ಪಟ್ಟಾ ಭೂಮಿಯಲ್ಲಿ ಗ್ರಾನೈಟ್‌ ಗಣಿಗಾರಿಕೆಗೆ ಶಾಸಕರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಟ್ಟಾ ಭೂಮಿಯಲ್ಲಿ ಗ್ರಾನೈಟ್‌ ಗಣಿಗಾರಿಕೆಗೆ ಅವಕಾಶ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಡಿ.ಎಸ್‌. ಹೊಲಗೇರಿ ಅವರ ಪ್ರಶ್ನೆಗೆ ಸಚಿವ ಸಿ.ಟಿ.ರವಿ ಉತ್ತರಿಸುವಾಗ ಇತರ ಶಾಸಕರೂ ಮಧ್ಯ ಪ್ರವೇಶಿಸಿ ಈ ಕುರಿತು ಸುದೀರ್ಘ ಚರ್ಚೆಗೆ ಒತ್ತಾಯಿಸಿದರು.

ಬಿಜೆಪಿಯ ದೊಡ್ಡನಗೌಡ ಮಾತನಾಡಿ, ‘ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಪಟ್ಟಾ ಭೂಮಿಯಲ್ಲಿ ಗ್ರಾನೈಟ್‌ ನಿಕ್ಷೇಪ ಇದೆ. ಇವುಗಳ ಗಣಿಗಾರಿಕೆಗೆ ಗುತ್ತಿಗೆ ನೀಡಬೇಕು. ಲೈಸೆನ್ಸ್‌ಗೆ ಅರ್ಜಿ ಹಾಕಿದರೂ ಗಣಿ ಗುತ್ತಿಗೆ ನೀಡುತ್ತಿಲ್ಲ. ನೆರೆಯ ಆಂಧ್ರದಲ್ಲಿ ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆಗೆ ಅರ್ಜಿ ಸಲ್ಲಿಸಿದ 90 ದಿನಗಳಲ್ಲಿ ಗುತ್ತಿಗೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಅದೇ ಮಾದರಿಯಲ್ಲಿ ಅನುಮತಿ ನೀಡಬೇಕು’ ಎಂದು ಆಗ್ರಹಿಸಿದರು.

ಕಾಂಗ್ರೆಸ್‌ನ ಅಮರೇಗೌಡ ಬಯ್ಯಾಪುರ ಅವರೂ ಪಟ್ಟಾ ಭೂಮಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬೇಕು ಮತ್ತು ಈ ಕುರಿತು ಹೆಚ್ಚಿನ ಚರ್ಚೆ ಆಗಬೇಕು ಎಂದರು.

ಗಣಿ ಸಚಿವ ಸಿ.ಸಿ.ಪಾಟೀಲ ಪರವಾಗಿ ಉತ್ತರ ನೀಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ 470 ಗ್ರಾನೈಟ್‌ ಗಣಿ ಗುತ್ತಿಗೆ ನೀಡಲಾಗಿದೆ. ಈ ಪೈಕಿ 305 ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿವೆ. ಉಳಿದ 165 ನಿರ್ವಹಿಸುತ್ತಿಲ್ಲ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು