ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲೆಗಳ ಅಭಿವೃದ್ಧಿ ಪ್ರಗತಿಯಲ್ಲಿ: ಜಾರಕಿಹೊಳಿ

Last Updated 10 ಮಾರ್ಚ್ 2020, 22:21 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಹದಿಂದ ಹಾನಿಗೀಡಾಗಿರುವ ನಾಲೆ ಮತ್ತಿತರ ಕಾಮಗಾರಿಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಮಹಾಂತೇಶ ಬಸವಂತರಾಯ ದೊಡ್ಡಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ತೀವ್ರ ಹಾನಿಗೊಳಗಾಗಿರುವ ರಸ್ತೆ, ಸೇತುವೆ, ನಾಲೆಗಳ ದುರಸ್ತಿಗೆ ₹248 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಶೀಘ್ರವಾಗಿ ಈ ಕಾಮಗಾರಿಗಳನ್ನು ಮುಗಿಸುತ್ತೇವೆ’ ಎಂದರು.

ಕಿತ್ತೂರು ಕ್ಷೇತ್ರ ವ್ಯಾಪ್ತಿಯ ರಸ್ತೆ ಹಾಗೂ ಸೇತುವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವ ಸ್ವೀಕಾರವಾಗಿಲ್ಲ. ಆದರೂ ಜಂಟಿ ಸಭೆ ನಡೆಸಿ ಸಮಗ್ರ ಪರಿಹಾರೋಪಾಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅವಿನಾಶ್ ಜಾಧವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಅಧಿವೇಶನ ಮುಗಿದ ನಂತರ ಚಿಂಚೋಳಿ ಕ್ಷೇತ್ರ ವ್ಯಾಪ್ತಿಯ ನೀರಾವರಿ ಯೋಜನೆ ಬಗ್ಗೆ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು’ ಎಂದು ಹೇಳಿದರು.

ಚಂದ್ರಪಳ್ಳಿ ಯೋಜನೆಗೆ ₹14.73 ಕೋಟಿ, ಬೆಣ್ಣೆತೋರಾ ಯೋಜನೆಗೆ ₹522.58 ಕೋಟಿ, ಕೆಳದಂಡೆ ಮುಲ್ಲಾಮಾರಿ ಯೋಜನೆಗೆ ₹293 ಕೋಟಿ ಹಾಗೂ ದಂಡೋರಿ ನಾಲಾ ಯೋಜನೆಗೆ ₹358.29 ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT