ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಿಜೆಪಿ ನಡೆ ಖಂಡನೀಯ: ಸಿದ್ದರಾಮಯ್ಯ

ವಾಲ್ಮೀಕಿ ಬಗ್ಗೆ ಅಪಾರ ಗೌರವ ಇದೆ ಎಂದ ಕಾಂಗ್ರೆಸ್ ನಾಯಕ
Last Updated 18 ಡಿಸೆಂಬರ್ 2019, 2:23 IST
ಅಕ್ಷರ ಗಾತ್ರ

ಬೆಂಗಳೂರು:ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಹೊರಟಿರುವ ಬಿಜೆಪಿ ಸರ್ಕಾರದನಡೆ ಖಂಡನೀಯ ಎಂದುವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ನಿರ್ಧಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು,ಇಂದಿರಾ ಕ್ಯಾಂಟೀನ್‌ಗೆ ನಮ್ಮೆಲ್ಲರ ಹೆಮ್ಮೆಯ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅವರಿಗೆ ಅವಮಾನ ಮಾಡಲು ಮುಂದಾಗಿದೆ ಎಂದು ಟೀಕಿಸಿದ್ದಾರೆ.

‘ಇಂತಹ ಕ್ಷುಲಕ ರಾಜಕಾಣವನ್ನು ಬಿಜೆಪಿ ತಕ್ಷಣ ಕೈ ಬಿಡಬೇಕು. ಬಿಜೆಪಿ ಬದಲಾಯಿಸಬೇಕಾಗಿರುವುದು ಇಂದಿರಾ ಕ್ಯಾಂಟೀನ್ ಹೆಸರಲ್ಲ, ತನ್ನೊಳಗಿನ ಸಣ್ಣ ಬುದ್ದಿಯನ್ನು’ ಎಂದು #SaveIndiraCanteen ಹ್ಯಾಷ್‌ಟ್ಯಾಗ್ ಅಡಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಘೋಷಣೆಯ ಮೂಲಕ ಬಡತನದ ವಿರುದ್ಧ ಯುದ್ದ ಸಾರಿ ಗೆದ್ದವರು. ಅವರು ಕೇವಲ ಕಾಂಗ್ರೆಸ್ ಪಕ್ಷದ ನಾಯಕಿಯಲ್ಲ, ದೇಶದ ನಾಯಕಿ. ಬಡವರ ಪಾಲಿನ ಆಪತ್ಪಾಂಧವರಾಗಿದ್ದರು. ಈ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡಲಾಗಿತ್ತು ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಬೇರೆ ಯೋಜನೆ ರೂಪಿಸಲಿ’:‘ಮಹರ್ಷಿ ವಾಲ್ಮೀಕಿಯವರು ರಾಮಾಯಣ ಎಂಬ ಮಹಾಕಾವ್ಯವನ್ನು ಬರೆದ ಮಹಾಕವಿ. ತಳಸಮುದಾಯದಲ್ಲಿ ಹುಟ್ಟಿ ಅಕ್ಷರ ಜಗತ್ತಿನ ಮೇರುಪರ್ವತ ಏರಿದ ಸಾಧಕ. ಅವರ ಸಾಧನೆಗೆ ಹೊಂದುವಂತಹ ಯೋಜನೆಯನ್ನು ಬಿಜೆಪಿ ಸರ್ಕಾರ ಪ್ರಾರಂಭಿಸಿ ಅವರಿಗೆ ಗೌರವ ತೋರಲಿ. ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಜನಾಕ್ರೋಶಕ್ಕೆ ಹೆದರಿದ ಬಿಜೆಪಿ ಸರ್ಕಾರ’:ನಮ್ಮ ಸರ್ಕಾರ ಜಾರಿಗೆ ತಂದಿರುವ ಪ್ರತಿಯೊಂದು ಬಡವರ ಪರ ಯೋಜನೆಗಳನ್ನು ರದ್ದು ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರ ಈಗ ಜನಾಕ್ರೋಶಕ್ಕೆ ಹೆದರಿ ಹೆಸರು ಬದಲಾಯಿಸಲು ಹೊರಟಿದೆ. ಇವರಿಗೆ ಬಡವರ ಪರವಾದ ಹೊಸ ಯೋಜನೆಗಳನ್ನು ರೂಪಿಸುವ ಶಕ್ತಿಯೂ ಇಲ್ಲ, ಮನಸ್ಸೂ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಇದರ ಹೆಸರನ್ನು ಬದಲಿಸಿ ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದುಕಂದಾಯ ಸಚಿವ ಆರ್.ಅಶೋಕ್ ಮಂಗಳವಾರ ತಿಳಿಸಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಚರ್ಚಿಸಿದ ನಂತರ ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲಾಗುವುದು. ಬೆಂಗಳೂರು ನಗರ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದುಅಶೋಕ್ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT