ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರವನ್ನು ಕೇಸರೀಕರಣ ಮಾಡುವೆ, ಮುಸ್ಲಿಮರ ಸೌಕರ್ಯ ತಡೆಯುವೆ: ರೇಣುಕಾಚಾರ್ಯ

Last Updated 23 ಜನವರಿ 2020, 1:03 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂದಿನ ದಿನಗಳಲ್ಲಿ ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳನ್ನು ಕೇಸರೀಕರಣ ಮಾಡಲಾಗುವುದು’ ಎಂದು ಹೊನ್ನಾಳಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆದ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಕ್ಷೇತ್ರವನ್ನು ಕೇಸರೀಕರಣ ಮಾಡಲು ಈಗಿನಿಂದಲೇ ಸಿದ್ಧತೆ ಆರಂಭಿಸುತ್ತೇನೆ’ ಎಂದು ತಿಳಿಸಿದರು.

ಮುಸ್ಲಿಮರ ಸೌಕರ್ಯಕ್ಕೆ ಕತ್ತರಿ:‘ಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಿಗೆ ವಿಶೇಷ ಆಸಕ್ತಿ ವಹಿಸಿ ಮೂಲಸೌಕರ್ಯ ಕಲ್ಪಿಸುವುದಿಲ್ಲ. ನನಗೆ ವೋಟು ಹಾಕದಿರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಇನ್ನು ಮುಂದೆ ಆ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವುದಿಲ್ಲ’ ಎಂದು ತಿಳಿಸಿದರು.

‘2018ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ನನಗೆ ಮತ ಹಾಕಿಲ್ಲ. ಮುಂದಿನ ಚುನಾವಣೆಯಲ್ಲೂ ವೋಟು ಹಾಕುವಂತೆ ಅವರನ್ನು ಕೇಳುವುದಿಲ್ಲ’ ಎಂದರು. ‘ಆರ್‌ಎಸ್‌ಎಸ್ ಹಾಗೂ ಹಿಂದೂಪರ ಸಂಘಟನೆಗಳನ್ನು ನಿಷೇಧಿಸುವಂತೆ ಹೇಳಿಕೆ ನೀಡಿರುವ ಶಾಸಕ ಜಮೀರ್ ಅಹಮದ್, ಯು.ಟಿ.ಖಾದರ್ ಅವರೇ ದೇಶ ದ್ರೋಹಿಗಳು’ ‘ಸಂಘ ಪರಿವಾರದವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT