ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆ ದಾಖಲಾತಿ, ಸಮೀಪದ ಶಾಲೆಗಳೊಂದಿಗೆ ವಿಲೀನ: 28,847 ಶಾಲೆಗಳಿಗೆ ಬೀಗ!

Last Updated 5 ಜುಲೈ 2018, 14:27 IST
ಅಕ್ಷರ ಗಾತ್ರ

ಬೆಂಗಳೂರು:ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳ ಕಟ್ಟಡ ದುರಸ್ತಿಗೆ ₹ 150 ಕೋಟಿ ಮೀಸಲಿಟ್ಟು, ಅಂಗನವಾಡಿ ಕೇಂದ್ರಗಳನ್ನು ಪ್ರಾಥಮಿಕ ಶಾಲಾ ಆವರಣಕ್ಕೆ ಸ್ಥಳಾಂತರಿಸಿ ‘ಬಾಲಸ್ನೇಹಿ ಕೇಂದ್ರ’ಗಳನ್ನಾಗಿ ಬಲವರ್ಧಿಸಲು ಚಿಂತನೆ ನಡೆಸಿರುವುದಾಗಿ ಹೇಳಿರುವ ರಾಜ್ಯ ಸರ್ಕಾರ, 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಬೀಗ ಹಾಕುವ ಸೂಚನೆಯನ್ನೂ ಬಜೆಟ್‌ನಲ್ಲಿ ನೀಡಿದೆ!

ಸರ್ಕಾರ ಬಜೆಟ್‌ನಲ್ಲಿ ಸೂಚಿರುಸುವಂತೆ ಕ್ರಮ ಕೈಗೊಂಡರೆ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸಮೀಪದ 8,530 ಸರ್ಕಾರಿ ಶಾಲೆಗಳ ಜತೆ ವಿಲೀನಗೊಳ್ಳಲಿವೆ.

* ಒಂದು ಕಿ.ಮೀ. ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿಸಲಿದೆ.

* ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಹೊಂದಿರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಗುರುತಿಸಲಾಗಿದ್ದು, ಅವುಗಳನ್ನು 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಇಂದು ಮಂಡಿಸಿದ ಬಜೆಟ್‌ನಲ್ಲಿ ಹೇಳಿದರು.

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4,100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ ‘ಬಾಲಸ್ನೇಹಿ ಕೇಂದ್ರ‘ ಸ್ಥಾಪಿಸಲು ಚಿಂತನೆ ನಡೆಸಿದೆ.

* ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವು ಕನ್ನಡ ಮಾಧ್ಯಮ ತರಗತಿ ಜತೆ ಆಂಗ್ಲ ಮಾಧ್ಯಮ ತರಗತಿ ಆರಂಭ. ಆರಂಭಿಕವಾಗಿ ಒಂದು ಸಾವಿರ ಶಾಲೆಗಳಲ್ಲಿ ಪ್ರಯೋಗಿಕವಾಗಿ ಚಾಲನೆ.

* ಹಂತ ಹಂತವಾಗಿ ಕಾರ್ಯಸಾಧ್ಯತೆ ಅನುಸಾರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ/ಯುಕೆಜಿ ಆರಂಭ.

* ರಾಜ್ಯದ 48 ಸಾವಿರ ಶಾಲೆಗಳಲ್ಲಿ ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ ಮೇಲೆ ನಿಗಾವಹಿಸಲು ಬಯೋಮಿಟ್ರಿಕ್‌ ಸಾಧನ ಅಳವಡಿಕೆ. ಈ ಯೋಜನೆ ಮುಂದಿನ 3 ವರ್ಷದಲ್ಲಿ ಜಾರಿ. ಈ ಉದ್ದೇಶಕ್ಕೆ ಪ್ರಸಕ್ತ ಸಾಲಿನಲ್ಲಿ ₹5 ಕೋಟಿ ಒದಗಿಸಲಿದೆ.

* ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆಯ ರಾಜ್ಯ ತರಬೇತಿ ಕೇಂದ್ರಗಳ ಮೂಲ ಸೌಲಭ್ಯಕ್ಕೆ ₹ 5 ಕೋಟಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT