ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಆದ್ಯತೆ: ಬಿ.ಎಸ್.ಯಡಿಯೂರಪ್ಪ

Last Updated 16 ಫೆಬ್ರುವರಿ 2020, 13:05 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅಸಂಖ್ಯ ಪ್ರಮಥರ ಗಣಮೇಳದಲ್ಲಿ ಮಾತನಾಡಿದ ಅವರು, ‘ರೈತರು ಸ್ವಾಭಿಮಾನ ಮತ್ತು ನೆಮ್ಮದಿಯಿಂದ ಬದುಕು ನಡೆಸಬೇಕಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಸಾಕಷ್ಟು ಹಣ ಮೀಸಲಿಡುವ ಮೂಲಕ ನೀರಾವರಿಗೆ ಆದ್ಯತೆ ನೀಡಲಾಗುವುದು‌. ಬೆಳೆಗಳಿಗೆ ಹೆಚ್ಚು ಬೆಂಬಲ ಬೆಲೆ ಘೋಷಿಸಲಾಗುವುದು’ ಎಂದರು.

'ಮಠ-ಮಾನ್ಯಗಳಿಗೂ ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು' ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗುವುದು. ಈ ಪೈಕಿ ₹ 100 ಕೋಟಿಯನ್ನು ಇದೇ ವರ್ಷದಲ್ಲಿ ವಿನಿಯೋಗಿಸಲಾಗುವುದು. ನಾಡಿನ ಎಲ್ಲರೂ ಕಲ್ಯಾಣ ಕರ್ನಾಟಕಕ್ಕೆ ಭೇಟಿ ಮಾಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

‘ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವ ಪುತ್ಥಳಿಗೆ ಈಗಾಗಲೇ ಸಾಕಷ್ಟು ಹಣ ನೀಡಲಾಗಿದ್ದು, ಇನ್ನಷ್ಟು ಅನುದಾನ ನೀಡಲಾಗುವುದು’ ಎಂದರು.

‘12 ಶತಮಾನದಲ್ಲಿ ಶರಣರು ಜಾತಿ, ಮತ, ಧರ್ಮದ ಚೌಕಟ್ಟಿಲ್ಲದೆ ನಡೆದುಕೊಂಡು ಬಂದಿದ್ದರು. ಅದೇ ಮಾದರಿಗೆ ಈ ಗಣಮೇಳ ಸಾಕ್ಷಿಯಾಗಿದೆ. ಬಸವಣ್ಣನವರು ನಡೆಸಿದ್ದ ಗಣಮೇಳದಲ್ಲಿ 1.96 ಲಕ್ಷ ಜನ ಸೇರಿದ್ದು ದಾಖಲೆಯಾಗಿತ್ತು’ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT