ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ದಾಳಿ ಪ್ರಕರಣ ಪ್ರಸ್ತಾವ: ಬಿಜೆಪಿಯಿಂದ ಪ್ರತಿಭಟನೆ, ಕಲಾಪ ಮುಂದೂಡಿಕೆ

Last Updated 14 ಫೆಬ್ರುವರಿ 2019, 7:00 IST
ಅಕ್ಷರ ಗಾತ್ರ

ಬೆಂಗಳೂರು: ಸದನದಲ್ಲಿ ಬಿಜೆಪಿ ಸದಸ್ಯಗಲಾಟೆ, ಗದ್ದಲದ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಧನವಿನಿಯೋಗ ವಿಧೇಯಕವನ್ನು ಮಂಡಿಸಿದರು. ಕೆಎಸ್‌ಒಯುಗೆ ಇಬ್ಬರು ಸದಸ್ಯರ ನಾಮ ನಿರ್ದೇಶನದ ಅನ್ವಯ ಧನವಿನಿಯೋಗ ವಿಧೇಯಕ ಅಂಗೀಕಾರವಾಗಿದೆ.

ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಪ್ರಸ್ತಾಪಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ರಾಹುಲ್‌ ಕಿಣಿ ಅವರ ಜೀವಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಭಾಧ್ಯಕ್ಷ ರಮೇಶ್‌ಕುಮಾರ್‌ ತಿಳಿಸಿದರು.

ಸ್ಪೀಕರ್‌ ಮಾತಿಗೆ ಜಗ್ಗದ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆಗೆ ಮುಂದಾದರು.

ಸದನದಲ್ಲಿ ಬಿಜೆಪಿ ಸದಸ್ಯರ ಗಲಾಟೆಮುಂದುವರಿಸಿದಹಿನ್ನೆಲೆ ಸ್ಪೀಕರ್‌ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ವಿಧಾನ ಪರಿಷತ್‌ನಲ್ಲೂ ಗಲಾಟೆ
ಶಾಸಕನ ಮನೆ ಮೇಲೆ ನಡೆದ ದಾಳಿಖಂಡಿಸಿ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT