ಸೋಮವಾರ, ಡಿಸೆಂಬರ್ 9, 2019
17 °C

ಟಿಕೆಟ್‌: ಅನರ್ಹರಿಗೆ ಖಚಿತ ಲಕ್ಷ್ಮಣ ಸವದಿಗೆ ಖೋತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಎಲ್ಲ 17 ಮಂದಿ ಅನರ್ಹ ಶಾಸಕರಿಗೆ ಟಿಕೆಟ್‌ ನೀಡಲು ಶನಿವಾರ ಇಲ್ಲಿ ನಡೆದ ಬಿಜೆಪಿಯ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದ ಟಿಕೆಟ್‌ ನೀಡದಿರಲು ನಿರ್ಧರಿಸಲಾಗಿದೆ.

ಉಪ ಚುನಾವಣೆ ನಡೆಯುವ ಈ ಭಾಗದ ಏಳು ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳ ಸಭೆ ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಯಿತು.

‘ಈ ಹಿಂದೆ ಬಿಜೆಪಿ ಅಭ್ಯರ್ಥಿಗಳಾಗಿದ್ದವರು ಟಿಕೆಟ್‌ ಆಸೆ ಬಿಡಬೇಕು. ನಾನು ಮುಖ್ಯಮಂತ್ರಿ ಆಗಿರಬೇಕು ಎನ್ನುವುದಾದರೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು’ ಎಂದು ಯಡಿಯೂರಪ್ಪ ಸ್ಪಷ್ಟ ಸಂದೇಶ ನೀಡಿದರು ಎಂದು ಗೊತ್ತಾಗಿದೆ.

ಇದನ್ನೂ ಓದಿ... ಉಪ ಚುನಾವಣೆ: ಉಸ್ತುವಾರಿಗಳ ನೇಮಕ, ಅನರ್ಹರಿಗೆ ಟಿಕೆಟ್‌


ಲಕ್ಷ್ಮಣ ಸವದಿ

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು