ಶನಿವಾರ, ಜೂಲೈ 11, 2020
23 °C

ನ.3ಕ್ಕೆ ರಾಜ್ಯದ 3 ಲೋಕಸಭೆ, 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓ.ಪಿ.ರಾವತ್‌ ಶನಿವಾರ ಮತದಾನದ ದಿನಾಂಕವನ್ನು ಪ್ರಕಟಿಸಿದರು. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗ, ಬಳ್ಳಾರಿ, ಮಂಡ್ಯ  

ಸಂಸದರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕದ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್‌ 3ರಂದು ಉಪ ಚುನಾವಣೆ ನಡೆಯಲಿವೆ.

ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕೂಡ ಇದೇ ದಿನ ನಡೆಯಲಿವೆ. ಎಲ್ಲ ಫಲಿತಾಂಶಗಳು ನವೆಂಬರ್‌ 6ರಂದು ಪ್ರಕಟವಾಗಲಿವೆ.

ಶಿವಮೊಗ್ಗ ಸಂಸದ ಬಿ.ಎಸ್‌. ಯಡಿಯೂರಪ್ಪ, ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಮತ್ತು ಮಂಡ್ಯ ಸಂಸದ ಸಿ. ಎಸ್‌. ಪುಟ್ಟರಾಜು ಅವರ ರಾಜೀನಾಮೆನಿಂದ ಈ ಮೂರು ಕ್ಷೇತ್ರಗಳು ತೆರವಾಗಿದ್ದವು.

ಇದೇ ಏಪ್ರಿಲ್‌–ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಈ ಮೂವರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾಮನಗರ, ಜಮಖಂಡಿ 

ಚನ್ನಪಟ್ಟಣ ಮತ್ತು ರಾಮನಗರ ಈ ಎರಡೂ ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಇದರಿಂದಾಗಿ ರಾಮನಗರ ವಿಧಾನಸಭಾ ಸ್ಥಾನ ತೆರವಾಗಿತ್ತು.

ಇನ್ನು ಕಾಂಗ್ರೆಸ್‌ ಶಾಸಕ ಸಿದ್ದು ನ್ಯಾಮಗೌಡ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕಾರಣ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಉಪಚುನಾವಣೆಯ ಫಲಿತಾಂಶ ನವೆಂಬರ್ 6 ರಂದು ಪ್ರಕಟವಾಗಲಿದೆ.  

ಬಿಜೆಪಿಯ ಬಿ.ಎಸ್.ಯಡಿಯೂರಪ್ಪ (ಶಿವಮೊಗ್ಗ),  ಶ್ರೀರಾಮುಲು (ಬಳ್ಳಾರಿ) ಹಾಗೂ ಜಾತ್ಯತೀತ ಜನತಾದಳದ ಸಿ.ಎಸ್.ಪುಟ್ಟರಾಜು (ಮಂಡ್ಯ) ಅವರು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರು ಕಳೆದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು.   

 

ಇದನ್ನೂ ಓದಿ: ನ.12ರಿಂದ ಡಿ.7: ಪಂಚರಾಜ್ಯ ವಿಧಾನಸಭಾ ಚುನಾವಣೆ; ಡಿ.11ಕ್ಕೆ ಮತ ಎಣಿಕೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು