ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಪ್ರಚಂಡ ಮತ: ಲಕ್ಷ್ಮಣ ಸವದಿ

Last Updated 9 ಡಿಸೆಂಬರ್ 2019, 8:50 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಕ್ಷೇತ್ರಗಳಲ್ಲಿ ಭಾರಿ ಬಹುಮತಗಳ ಅಂತರದಿಂದ ಜಯಭೇರಿ ಬಾರಿಸಿರುವುದು ನನಗೆ ಅತ್ಯಂತ ಸಂತೋಷ ತಂದಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಅಥಣಿ ಮತ್ತು ಕಾಗವಾಡ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವಂತಹ ಜವಾಬ್ದಾರಿಯನ್ನು ವಹಿಸಲಾಗಿತ್ತು. ಇದನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಹಾಗೂ ಈ ಎರಡು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿಕೊಂಡು ಬರುವಲ್ಲಿ ನನಗೆ ಸಹಕಾರ ನೀಡಿದ ಎಲ್ಲಾ ಮತ ಬಾಂಧವರಿಗೂ, ಬಿಜೆಪಿಯ ಎಲ್ಲಾ ಮುಖಂಡರಿಗೂ ಹಾಗೂ ಆತ್ಮೀಯ ಕಾರ್ಯಕರ್ತರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸ ಬಯಸುತ್ತೇನೆ ಎಂದು ಸವದಿ ಹೇಳಿದ್ದಾರೆ.

ಅದೇ ರೀತಿ ಇಡೀ ರಾಜ್ಯದಲ್ಲಿ ಬಿಜೆಪಿಯ ಪರ ಇರುವಂತಹ ಅಲೆ ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಮುಂದೆಯೂ ತಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಮಾರ್ಗದರ್ಶನಗಳೊಂದಿಗೆ ಉತ್ತಮ ಆಡಳಿತ ನೀಡುವುದಕ್ಕೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ತಿಳಿಸುತ್ತಾ, ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ವಾಮಮಾರ್ಗದಿಂದ ಬಿಜೆಪಿಯನ್ನು ಸೋಲಿಸಬೇಕೆಂಬ ವಿರೋಧಪಕ್ಷದವರ ಷಡ್ಯಂತ್ರಕ್ಕೆ ಜನತಾ ಜನಾರ್ಧನರು ತಕ್ಕ ಪಾಠ ಕಲಿಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಮತ್ತೊಮ್ಮೆ ಸಾಬೀತಾಗಿದೆ. ಅಷ್ಟೇ ಅಲ್ಲ ಕೇಂದ್ರ ಮತ್ತು ರಾಜ್ಯಗಳಲ್ಲಿ ಸ್ಥಿರ ಸರ್ಕಾರ ಮತ್ತು ಜನಪರ ಆಡಳಿತ ನೀಡುವುದಕ್ಕೆ ಜನರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸವದಿ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT