ಭಾನುವಾರ, ಡಿಸೆಂಬರ್ 8, 2019
24 °C

'ಅನರ್ಹರ' ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ಜನರಿಗಿದೆ: ಎಚ್‌.ಡಿ.ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರಗೊಂಡಿರುವ ಅನರ್ಹ ಶಾಸಕರ ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ಜನರಿಗೆ ಇದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾಳೆ ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಮತದಾರರು ಯಾವುದೇ ಆಸೆ–ಆಮಿಷಗಳಿಗೆ ಬಲಿಯಾಗದೇ ಜೆಡಿಎಸ್‌ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.  

ಇದನ್ನೂ ಓದಿ... ಖರ್ಗೆ–ದೇವೇಗೌಡ ಹಳೆ ಹುಲಿಗಳು, ಅವರು ಸೇರಿದರೆ ಏನಾಗುತ್ತದೆಯೋ: ಲಕ್ಷ್ಮಣ ಸವದಿ

‌ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಹಾಗಾಗಿ ರಾಜ್ಯದ ಘನತೆಯನ್ನು ಎತ್ತಿ ಹಿಡಿಯುವಂತೆ ಸೂಚಿಸಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು