ಶುಕ್ರವಾರ, ಡಿಸೆಂಬರ್ 13, 2019
24 °C

ಬಿಜೆಪಿಗೆ ಶೀಘ್ರವೇ ಸಂಕಷ್ಟ ಕಾಲ: ಶಾಸಕ ಎಚ್‌.ಡಿ. ರೇವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳೆನರಸೀಪುರ (ಹಾಸನ): ‘ಸಿದ್ಧಾಂತ ಇಲ್ಲದ ಬಿಜೆಪಿಯಿಂದ ನಾವು ಪಾಠ ಕಲಿಯಬೇಕಿಲ್ಲ. ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಆರಂಭವಾಗಲಿದೆ. ಜನ ಬುದ್ಧಿ ಕಲಿಸಲು ಸಜ್ಜಾಗಿದ್ದಾರೆ’ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ರೋಷನ್‌ಬೇಗ್, ಮೊದಲೇ ದೇವೇಗೌಡರಿಗೆ ತಿಳಿಸಿ‌ದ್ದರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರನ್ನು ಕಾಂಗ್ರೆಸ್‌ ಸರಿಯಾಗಿ ನಡೆಸಿಕೊಳ್ಳದ ಕಾರಣ ಸ್ವಾಭಿಮಾನಿಯಾದ ಅವರು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇವೆ’ ಎಂದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು