ಬುಧವಾರ, ಜೂನ್ 29, 2022
21 °C
ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆ

ಫಲಿತಾಂಶ: ಹುಣಸೂರಿನಲ್ಲಿ ಎಚ್.ವಿಶ್ವನಾಥ್, ಹೊಸಕೋಟೆಯಲ್ಲಿ ಎಂಟಿಬಿಗೆ ಹಿನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಮತ್ತು ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಹುಣಸೂರಿನಲ್ಲಿ ಬಿಜೆಪಿಯ ಎಚ್.ವಿಶ್ವನಾಥ್‌ಗೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ವಿರುದ್ಧ ಸಾವಿರಾರು ಮತಗಳ ಹಿನ್ನಡೆಯಾಗಿದೆ. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಬಿಜೆಪಿಯ ಎಂ.ಟಿ.ಬಿ. ನಾಗರಾಜ್‌ಗೆ ಹಿನ್ನಡೆಯಾಗಿದೆ.

ಹೊಸಕೋಟೆಯಲ್ಲಿ 2ನೇ ಸುತ್ತಿನ ಮತ ಎಣಿಕೆ ಮುಕ್ತಾಯ‌ವಾದಾಗ ಶರತ್ ಬಚ್ಚೇಗೌಡ (ಪಕ್ಷೇತರ) 8,780 ಮತ ಗಳಿಸಿದ್ದು, ನಾಗರಾಜ್ (ಬಿಜೆಪಿ) 4,960 ಮತ ಗಳಿಸಿದ್ದಾರೆ. ಕಾಂಗ್ರೆಸ್ 3,151 ಮತ ಗಳಿಸಿದೆ. 3ನೇ ಸುತ್ತಿನಲ್ಲೂ ಶರತ್ 5,528 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಹುಣಸೂರಿನಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಕಾಂಗ್ರೆಸ್‌ನ ಎಚ್.ಪಿ.ಮಂಜುನಾಥ್ 16,990 ಗಳಿಸಿದ್ದರೆ ಬಿಜೆಪಿಯ ಎಚ್.ವಿಶ್ವನಾಥ್ 11,597 ಮತ ಗಳಿಸಿದ್ದಾರೆ. ಜೆಡಿಎಸ್‌ನ ದೇವರಹಳ್ಳಿ ಸೋಮಶೇಖರ್ 8,247 ಮತ ಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ 5,393 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು