ಬುಧವಾರ, ಜನವರಿ 29, 2020
31 °C

ಉಪಚುನಾವಣೆ ಫಲಿತಾಂಶ| ಬಿಜೆಪಿಗೆ ಸಿಕ್ಕ ನೈತಿಕ ವಿಜಯ: ಸಚಿವ ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ನಿರೀಕ್ಷಿತ ಫಲಿತಾಂಶ ಪಡೆದಿದೆ. ಇದು ಬಿಜೆಪಿಯ ನೈತಿಕ ವಿಜಯ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಸಿಕ್ಕಿದೆ ಎಂದರು.

‘ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದರು. ಅವರ ಅಪಪ್ರಚಾರವೇ ಭಾರತೀಯ ಜನತಾ ಪಕ್ಷಕ್ಕೆ ಧನಾತ್ಮಕ ಪರಿಣಾಮ ಬೀರಿತು. ಮತದಾರರು ಎಲ್ಲವನ್ನೂ ಪರಿಶೀಲಿಸಿ ಸ್ಥಿರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: 

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಎರಡೆರಡು ಬಾರಿ ಪ್ರಚಾರ ನಡೆಸಿದ್ದರು. ಅವರ ಶ್ರಮಕ್ಕೆ ಸಿಕ್ಕ ಪ್ರತಿಫಲವೇ ಹನ್ನೆರಡು ಕ್ಷೇತ್ರಗಳ ಗೆಲುವಿಗೆ ಕಾರಣ’ ಎಂದು ಹೇಳಿದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉಪ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ  ಹಿನ್ನಡೆ. ಸಿದ್ದರಾಮಯ್ಯ ಅವರು ಗೆಲ್ಲುವ ಬಗ್ಗೆ ಚಿಂತಿಸದೇ ವಿರೋಧ ಪಕ್ಷದ ಸ್ಥಾನ ಉಳಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು ಎಂದಿದ್ದೆ. ಅದೇ ರೀತಿ ಮತದಾರರು ಅವರಿಗೆ ತಕ್ಕಪಾಠ ಕಲಿಸಿದ್ದಾರೆ ಎಂದು ಶೆಟ್ಟರ್ ಹೇಳಿದರು.

ಅನರ್ಹರನ್ನು ಸೋಲಿಸುವುದೇ ನನ್ನ ಗುರಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಈಗ ಜೆಡಿಎಸ್ ಅಸ್ತಿತ್ವವೇ ಶೂನ್ಯ ಸ್ಥಾನಕ್ಕೆ ಬಂದಿದೆ. ನೈತಿಕತೆ ಬಗ್ಗೆ ಮಾತನಾಡುವ ಜೆಡಿಎಸ್, ಕಾಂಗ್ರೆಸ್ ಜನರ ಕ್ಷಮೆಯಾಚನೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು