ಶನಿವಾರ, ಜನವರಿ 25, 2020
28 °C

ಉಪಚುನಾವಣೆ ಫಲಿತಾಂಶ: ಬಿಗಿ ಭದ್ರತೆಯೊಂದಿಗೆ ಮತ ಎಣಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ಬೆಳಿಗ್ಗೆ ಬಿಗಿ ಭದ್ರತೆಯೊಂದಿಗೆ ಆರಂಭಗೊಂಡಿದೆ.

ಹುಣಸೂರು ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿರುವ ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ಮಾಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಒಟ್ಟು 107 ಅಂಚೆ ಮತಗಳಿವೆ. ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಸ್ಪರ್ಧೆಯಿಂದ ಈ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ವಿಶ್ವನಾಥ್ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್‌ನ ಎಚ್.ಪಿ.ಮಂಜುನಾಥ್ ಮತ್ತು ಜೆಡಿಎಸ್‌ನ ದೇವರಹಳ್ಳಿ ಸೋಮಶೇಖರ್ ಕಣದಲ್ಲಿದ್ದಾರೆ.

ಶಿವಾಜಿನಗರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಆವರಣದಲ್ಲಿ ನಡೆಯುತ್ತಿದೆ

ದೇವನಹಳ್ಳಿ ಆಕಾಶ್ ಶಾಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಉಪಸ್ಥಿತಿಯಲ್ಲಿ ಭದ್ರತಾ ಕೊಠಡಿ ತೆರೆಯಲಾಗಿದೆ. ಹೊಸಕೋಟೆ ಮತ ಕ್ಷೇತ್ರದ ಮತ ಎಣಿಕೆ ಇಲ್ಲಿ ನಡೆಯುತ್ತಿದೆ.

ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್, ಬಿಜೆಪಿಯ ನಾರಾಯಣಗೌಡ ಮತ್ತು ಕಾಂಗ್ರೆಸ್‌ನ ಕೆ.ಬಿ.ಚಂದ್ರಶೇಖರ್ ಸಮಕ್ಷಮ ಸ್ಟ್ರಾಂಗ್‌ ರೂಂ ತೆರೆದು ಮತ ಎಣಿಕೆಗೆ ಚಾಲನೆ ನೀಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು- ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ದೇವಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು