ಬುಧವಾರ, ಜನವರಿ 29, 2020
29 °C

ಮತದಾನ ನಡೆಯುತ್ತಿರುವ 15 ಕ್ಷೇತ್ರಗಳಲ್ಲೂ ಮತದಾರರಿಂದ ನೀರಸ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲೂ ತಮ್ಮ ಹಕ್ಕು ಚಲಾಯಿಸಲು ಮತದಾರರು ಮುಂದಾಗಿಲ್ಲ. ಎಲ್ಲೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆ 11 ಗಂಟೆ ವೇಳೆಗೆ 15 ಕ್ಷೇತ್ರಗಳಲ್ಲಿ ಸರಾಸರಿ ಶೇ 17.60ರಷ್ಟು ಮತದಾನವಾಗಿದೆ. ಶಿವಾಜಿನಗರ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ 9.2ರಷ್ಟು ಮಂದಿ ಮತದಾನ ಮಾಡಿದ್ದಾರೆ. ಕೆ.ಆರ್.ಪುರದಲ್ಲಿ ಶೇ 10.97, ಯಶವಂತಪುರದಲ್ಲಿ ಶೇ 13.13, ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶೇ 15.71ರಷ್ಟು ಮಂದಿ ಮತ ಹಾಕಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇರುವ ನಾಲ್ಕೂ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಮನೆಯಿಂದ ಹೊರ ಬಂದಂತೆ ಕಾಣುತ್ತಿಲ್ಲ. ರಾಜ್ಯದ ಉಳಿದ ಕ್ಷೇತ್ರಗಳಲ್ಲೂ ಅಂತಹ ಉತ್ಸಾಹ ಕಂಡುಬರದಿದ್ದರೂ ಶೇ 20ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು