ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಲೋಕಸಭೆ, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ

Last Updated 3 ನವೆಂಬರ್ 2018, 2:59 IST
ಅಕ್ಷರ ಗಾತ್ರ

ಬೆಂಗಳೂರು:ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶನಿವಾರ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಶಿವಮೊಗ್ಗ, ಬಳ್ಳಾರಿಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳು;ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಶಿವಮೊಗ್ಗದ ಶಿಕಾರಿಪುರದ ಮತಗಟ್ಟೆ 132ರಲ್ಲಿ ಮತ ಚಲಾಯಿಸಿದರು. ಶಿವಮೊಗ್ಗ ಕ್ಷೇತ್ರದಲ್ಲಿಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ,ಜಮಖಂಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಸಹ ಮತ ಚಲಾಯಿಸಿದರು.

ಚುನಾವಣೆಗೆ ಎರಡು ದಿನ ಇರುವಾಗ ರಾಮನಗರ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಎಲ್‌. ಚಂದ್ರಶೇಖರ್‌ಮತ ಸಮರದಿಂದ ಪಲಾಯನ ಮಾಡಿ ಕಾಂಗ್ರೆಸ್‌ ಸೇರಿದ್ದು ಪಕ್ಷಕ್ಕೆ ಭಾರಿ ಮುಖಭಂಗ ಉಂಟುಮಾಡಿದೆ. ಕಾಂಗ್ರೆಸ್‌ ಸೇರಿರುವ ಚಂದ್ರಶೇಖರ್ ಜೆಡಿಎಸ್‌ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಬಿಜೆಪಿಯು ಕೇವಲ ಚಿಹ್ನೆಯನ್ನು ಮುಂದಿಟ್ಟುಕೊಂಡು ಮತಯಾಚಿಸುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT