ಮಂಗಳವಾರ, ಜೂನ್ 28, 2022
26 °C

ಹುಣಸೂರು: ಎಚ್.ವಿಶ್ವನಾಥ್ ಸೋಲು ಬಹುತೇಕ ಖಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸೂರು: ತೀವ್ರ ಕುತೂಹಲ ಕೆರಳಿಸಿದ್ದ ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಎಚ್.ಪಿ.ಮಂಜುನಾಥ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

15ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಮಂಜುನಾಥ್ ಅವರು 27,826 ಮತಗಳ ಮುನ್ನಡೆಯಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣಕರ್ತರಲ್ಲಿ ಒಬ್ಬರಾಗಿದ್ದ ಎಚ್.ವಿಶ್ವನಾಥ್ ಸೋಲಿನ ಹಾದಿ ಹಿಡಿದಿದ್ದಾರೆ.

ಮಂಜುನಾಥ್ ಒಟ್ಟು 69,859 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿದ್ದ ವಿಶ್ವನಾಥ್ 42,033 ಮತಗಳನ್ನು ಪಡೆದಿದ್ದಾರೆ.

ಜೆಡಿಎಸ್‌ನ ದೇವರಹಳ್ಳಿ ಸೋಮಶೇಖರ್ 25,636 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಇಲ್ಲಿ ಒಟ್ಟು 1,83,728 ಮತಗಳು ಚಲಾವಣೆಯಾಗಿದ್ದವು. ಇದುವರೆಗೆ 1,41,724 ಮತಗಳ ಎಣಿಕೆ ಪೂರ್ಣಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು