ಭಾನುವಾರ, ಸೆಪ್ಟೆಂಬರ್ 15, 2019
30 °C

ಸಂಪುಟ ವಿಸ್ತರಣೆಗೆ ಕೊನೆಗೂ ಹಸಿರು ನಿಶಾನೆ: ಆ.20ಕ್ಕೆ ಮುಹೂರ್ತ ನಿಗದಿ

Published:
Updated:

ಬೆಂಗಳೂರು: ಬಿ.ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಮಂತ್ರಿಮಂಡಲ ವಿಸ್ತರಣೆಯು ಮುಂದಿನ ಮಂಗಳವಾರ (ಆ.20) ನಡೆಯಲಿದೆ. 

ಈ ಕುರಿತು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ  ಮಾಹಿತಿ ಲಭ್ಯವಾಗಿದೆ. ಆ.20ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅಂದು ಮಧ್ಯಾಹ್ನ ಸಂಪುಟ ವಿಸ್ತರಣೆ ನಡೆಯಲಿದೆ. 

ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಲ್ಲಿ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು.  ಮಾತುಕತೆ ಫಲಪ್ರದವಾಗಿದ್ದು, ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಸಿಕ್ಕಿದೆ. 

ಮಂತ್ರಿ ಮಂಡಲವಿಲ್ಲದೇ ಸರ್ಕಾರ ನಡೆಯುತ್ತಿರುವುದನ್ನು ವಿರೋಧಿಸಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದವು. ಅಲ್ಲದೆ, ಇದು ಏಕವ್ಯಕ್ತಿ ಸರ್ಕಾರ ಎಂದು ಗೇಲಿ ಮಾಡಿದ್ದವು. 

Post Comments (+)