ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿರ್ದಿಷ್ಟಾವಧಿಗೆ ಸಿಇಟಿ ಪರೀಕ್ಷೆ ಮುಂದಕ್ಕೆ: ಸಿ.ಎನ್ ಅಶ್ವತ್ಥ ನಾರಾಯಣ 

Last Updated 30 ಮಾರ್ಚ್ 2020, 15:01 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಸೋಮವಾರ ತಿಳಿಸಿದರು.

ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಗಳು ಇನ್ನೂ ಪೂರ್ಣ ವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ‌ ಅವರು ಈ ತೀರ್ಮಾನವನ್ನು ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT