ಬೆಂಗಳೂರು: ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಈ ಭಾನುವಾರ (ದಿನಾಂಕ 31–05–2020) ಸಂಪೂರ್ಣ ಲಾಕ್‌ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಜನರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಇರುವುದಿಲ್ಲ. ಹೀಗಾಗಿ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿತ್ತು.

Covid-19 India Update: ಕಳೆದ 24 ಗಂಟೆಗಳಲ್ಲಿ 7,964 ಹೊಸ ಪ್ರಕರಣ, 265 ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.