ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತ ಪೇದೆ ಆತ್ಮಹತ್ಯೆ: ಸಿಎಂ ಯಡಿಯೂರಪ್ಪ ಸಂತಾಪ

ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟಿದ್ದ ರಾಜ್ಯ ಪೊಲೀಸ್ ಮೀಸಲು ಪಡೆಯ (ಕೆಎಸ್‌ಆರ್‌ಪಿ) ಹೆಡ್‌ ಕಾನ್‌ಸ್ಟೆಬಲೊಬ್ಬರು, ಪೊಲೀಸ್ ವಾಹನದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‌ನ ಸಶಸ್ತ್ರ ಪೇದೆ ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಎಂದು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಪೊಲೀಸ್ ಸಿಬ್ಬಂದಿ ಕೋವಿಡ್ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿಯಲ್ಲಿ ಯೋಧರಾಗಿ ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ, ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೂ ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜೊತೆಗಿರುತ್ತದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT