ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಏನೇನು ಚರ್ಚೆಯಾಯ್ತು?

Last Updated 3 ಏಪ್ರಿಲ್ 2020, 10:02 IST
ಅಕ್ಷರ ಗಾತ್ರ

ಬೆಂಗಳೂರು: 15 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಹೆಚ್ಚುವರಿಯಾಗಿ ₹ 1 ಸಾವಿರ ಜಮೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಮಿಕ ಇಲಾಖೆಗೆ ಸೂಚಿಸಿದರು. ಈಗಾಗಲೇ ₹ 1 ಸಾವಿರ ಜಮೆ ಮಾಡಲಾಗಿದೆ ಎಂದೂ ಅವರು ತಿಳಿಸಿದರು.

ಕೊರೊನಾ ವೈರಸ್ ಸೋಂಕು (ಕೋವಿಡ್–19) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಸಚಿವರ ಉನ್ನತ ಮಟ್ಟದ ಸಭೆ ಶುಕ್ರವಾರ ನಡೆಯಿತು.

ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋಪಾಲಯ್ಯ, ಎಸ್.ಸುರೇಶ್ ಕುಮಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್, ಶಾಸಕ ಎಸ್.ಆರ್.ವಿಶ್ವನಾಥ್ ಉಪಸ್ಥಿತರಿದ್ದರು.

ಸಭೆಯಲ್ಲಿ ಚರ್ಚೆಯಾದ ಪ್ರಮುಖ ವಿಷಯಗಳು ಹೀಗಿವೆ:

* ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮವನ್ನು ಪರಿಶೀಲಿಸಲು ಸೂಚಿಸಲಾಯಿತು.

* ವಿವಿಧ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸೇವೆಗೆ ತುರ್ತು ಸಂದರ್ಭದಲ್ಲಿ ಓಲಾ ಉಬರ್ ಕಂಪೆನಿಗಳ ನೆರವಿನೊಂದಿಗೆ ವಾಹನ ಒದಗಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಯಿತು.

* ಬೆಂಗಳೂರಿನಲ್ಲಿ ಉಚಿತ ಆಹಾರ ವಿತರಣೆ ಕ್ರಮ ಬದ್ಧವಾಗಿ ಆಗುತ್ತಿಲ್ಲ ಎಂಬ ಆರೋಪಗಳಿವೆ. ಇದನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರೊಂದಿಗೆ ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ, ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

* ಪಿಪಿಇ ಕಿಟ್‍ಗಳ ಗುಣಮಟ್ಟ ಹಾಗೂ ಕಿಟ್‍ಗಳ ಕೊರತೆ ನಿವಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.

* ಈಗಾಗಲೇ 1 ಲಕ್ಷ ಪಿಪಿಇ ಕಿಟ್‍ಗಳ ಪೂರೈಕೆಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಲಕ್ಷ ಪಿಪಿಇ ಕಿಟ್‌ಗಳ ಪೂರೈಕೆಗೆ ಕಾರ್ಯಾದೇಶ ನೀಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT