ಭಾನುವಾರ, ಏಪ್ರಿಲ್ 5, 2020
19 °C
ಪಾಕ್ ಪರ ಘೋಷಣೆ ಪ್ರಕರಣದ ಹಿಂದಿರುವ ಸಂಘಟನೆಗಳ ವಿರುದ್ಧ ಕ್ರಮ: ಸಿಎಂ

ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬೆಂಗಳೂರಿನಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ತಪ್ಪು ಮಾಡಿದವರಿಗೆ ಸೂಕ್ತ  ಶಿಕ್ಷೆಯಾಗಬೇಕು. ಇದರ ಹಿಂದೆಯಿರುವ ಸಂಘಟನೆಗಳ ಮೇಲೆ ಕ್ರಮ ಜರಗಿಸಲಾಗುವುದು ಎಂದರು.

ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ದೇಶದ್ರೋಹದ ಕೆಲಸ: ಎಚ್.ಡಿ. ಕುಮಾರಸ್ವಾಮಿ

ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಕೊನೆಯಾಗುವುದಿಲ್ಲ. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದರು.

‘ಅವಳ ಕೈಕಾಲು ಮುರಿಯಿರಿ, ಜಾಮೀನು ಸಿಗಬಾರದು. ನಾನು ಅವಳ ರಕ್ಷಣೆಗೆ ಹೋಗಲ್ಲ’ ಎಂದು ಅವಳ ತಂದೆಯವರೇ ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು