ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಆರ್ಥಿಕ ಪ್ಯಾಕೇಜ್‌ಗೆ ಸಿಎಂ ಯಡಿಯೂರಪ್ಪ ಸ್ವಾಗತ

Last Updated 13 ಮೇ 2020, 2:42 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಬಿಕ್ಕಟ್ಟು ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ ಎಲ್ಲ ವರ್ಗಗಳ ಜನತೆಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ ₹20 ಲಕ್ಷ ಕೋಟಿ ಪ್ಯಾಕೇಜ್‌ ಪ್ರಕಟಿಸಿರುವುದನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ವಾಗತಿಸಿದ್ದಾರೆ.

‘ನಮ್ಮ ಜಿಡಿಪಿಯ ಶೇ 10ರಷ್ಟು ಪ್ಯಾಕೇಜ್‌ ಪ್ರಕಟಿಸಿರುವುದು ಅಭೂತಪೂರ್ವವಾದುದು. ಎದುರಾಗಿರುವ ಸವಾಲನ್ನು ಅವಕಾಶವನ್ನಾಗಿ ಪರಿವರ್ತಿಸಿ, ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ವಸುಧೈವ ಕುಟುಂಬಕಂ ಪರಿಕಲ್ಪನೆಯ ಸದೃಢ ಸಾಮಾಜಿಕ ವ್ಯವಸ್ಥೆ ಸಾಕಾರಗೊಳಿಸಲು ಮೋದಿಯವರ ಕ್ರಮದಿಂದ ಸಮಸ್ತ ಭಾರತೀಯರ ಆತ್ಮ ವಿಶ್ವಾಸ ಹೆಚ್ಚಿಸಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

₹20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿದಾರರಿಗೆ ಹೊಸ ಭರವಸೆ ಮತ್ತು ಚೈತನ್ಯವನ್ನು ತುಂಬಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

‘ಲೋಕಲ್ ಸೇ ಗ್ಲೋಬಲ್ ಎನ್ನುವ ಮೋದಿ ಅವರ ಘೋಷಣೆ ಐತಿಹಾಸಿಕ. ಲೋಕಲ್ ಉತ್ಪನ್ನಗಳಿಗೆ ವೋಕೋಲ್ (ಬಾಯಿ ಮಾತಿನ ಪ್ರಚಾರ) ಬಲವಿರಲಿ ಎಂಬುದು ನಮ್ಮ ಆದ್ಯತೆಯಾಗಬೇಕು ಎಂದು ಅವರು ಪ್ರತಿಪಾದಿಸಿರುವುದು ನವಭಾರತದ ಉದಯಕ್ಕೆ ನಾಂದಿ ಹಾಡಿದ್ದಾರೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ

‘ಯಾವುದೇ ದೇಶದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ವಿಶೇಷ ಪ್ಯಾಕೇಜ್‌ ನೀಡಿದ ಉದಾಹರಣೆ ಇಲ್ಲ. ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಜನರ ಸಮಸ್ಯೆ ಅರಿತು ದೊಡ್ಡ ಪ್ರಮಾಣದ ಪ್ಯಾಕೇಜ್‌ ಘೋಷಿಸಿರುವುದು ಅಭಿನಂದನೀಯ’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಅವರೂ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT