ಗುರುವಾರ , ಜುಲೈ 16, 2020
26 °C

Covid-19 Karnataka Update | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,922ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇ 29ರ ಸಂಜೆ 5 ಗಂಟೆಯಿಂದ ಮೇ 30ರ ಸಂಜೆ 5 ಗಂಟೆವರೆಗೆ ಕೋವಿಡ್-19ಗೆ ಸಂಬಂಧಿಸಿದ 141 ಹೊಸ ಪ್ರಕರಣಗಳು ದೃಢ ಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,922ಕ್ಕೆ ಮತ್ತು ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಉಳಿದಂತೆ 997 ಜನರು ಗುಣಮುಖರಾಗಿದ್ದು, 1,874 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 15 ರೋಗಿಗಳ ಸಂಖ್ಯೆ ಗಂಭೀರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ.

ಇಂದು ಬೆಂಗಳೂರು ನಗರದಲ್ಲಿ 33, ಯಾದಗಿರಿಯಲ್ಲಿ 18, ದಕ್ಷಿಣ ಕನ್ನಡದಲ್ಲಿ 14, ಹಾಸನ ಮತ್ತು ಉಡುಪಿಯಲ್ಲಿ ತಲಾ 13, ವಿಜಯಪುರದಲ್ಲಿ 11, ಬೀದರ್‌ನಲ್ಲಿ 10, ಶಿವಮೊಗ್ಗದಲ್ಲಿ 6, ಹಾವೇರಿ ಮತ್ತು ದಾವಣಗೆರೆಯಲ್ಲಿ ತಲಾ 4, ಕೋಲಾರದಲ್ಲಿ 3, ಉತ್ತರ ಕನ್ನಡ, ಧಾರವಾಡ, ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 2, ಚಿತ್ರದುರ್ಗ, ತುಮಕೂರು, ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: ಕೋವಿಡ್-19 ಗೆದ್ದು ಮನೆಗೆ ಮರಳಿದ 81 ವರ್ಷದ ವೃದ್ಧೆ: ವೈದ್ಯರ ಸಂಭ್ರಮ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು