ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ‘ಹೊಸ’ ಅತೃಪ್ತರ ಮನವಿ ಆಲಿಸಲು ಸುಪ್ರೀಂಕೋರ್ಟ್‌ ಸಮ್ಮತಿ

ಅಕ್ಷರ ಗಾತ್ರ

ನವದೆಹಲಿ: ತಮ್ಮ ರಾಜೀನಾಮೆ ಆಂಗೀಕರಿಸುವಂತೆ ಸ್ಪೀಕರ್‌ಗೆ ಸೂಚಿಸಬೇಕು ಎಂದು ಈಗಾಗಲೇ ಅರ್ಜಿ ಸಲ್ಲಿಸಿರುವ 10 ಮಂದಿ ಅತೃಪ್ತರ ಜೊತೆಗೆಕಾಂಗ್ರೆಸ್‌ನ ಇತರ ಐವರು ಅತೃಪ್ತ ಶಾಸಕರ ಮನವಿ ಆಲಿಸಲು ಸುಪ್ರೀಂಕೋರ್ಟ್‌ ಸೋಮವಾರ ಒಪ್ಪಿಕೊಂಡಿತು.

ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್, ಮಂಗಳವಾರ ವಿಚಾರಣೆಗೆ ಬರಲಿರುವ ಪ್ರಕರಣದಲ್ಲಿ ಈ ಐವರನ್ನೂ ಅರ್ಜಿದಾರರಾಗಿ ಪರಿಗಣಿಸಲು ಒಪ್ಪಿಗೆ ಸೂಚಿಸಿದರು.

ತಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ತಡ ಮಾಡುತ್ತಿದ್ದಾರೆ ಎಂದು ಜುಲೈ 13ರಂದು ಶಾಸಕರಾದ ಆನಂದ್‌ ಸಿಂಗ್, ಕೆ.ಸುಧಾಕರ, ಎನ್.ನಾಗರಾಜ್, ಮುನಿರತ್ನ ಮತ್ತು ರೋಶನ್‌ಬೇಗ್ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಶಾಸಕರ ರಾಜೀನಾಮೆ ವಿಚಾರವಾಗಿ ಮಂಗಳವಾರದವರೆಗೆ (ಜುಲೈ 16) ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸುಪ್ರೀಂಕೋರ್ಟ್‌ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕಳೆದ ಶುಕ್ರವಾರ (ಜುಲೈ 12) ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT