ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಐದು ರಾಜ್ಯಗಳ ಜನರಿಗೆ ವಿಮಾನಯಾನ ನಿರ್ಬಂಧಿಸಿದ ಕರ್ನಾಟಕ

Last Updated 28 ಮೇ 2020, 13:44 IST
ಅಕ್ಷರ ಗಾತ್ರ

ಬೆಂಗಳೂರು: ವಿಮಾನ ಮೂಲಕ ರಾಜ್ಯಕ್ಕೆ ಬರುವ ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರಿಗೆ ನಿರ್ಬಂಧ ಹೇರಲು ಸಚಿವ ಸಂಪುಟ ತೀರ್ಮಾನಿಸಿದೆ.

ಮಹಾರಾಷ್ಟ್ರ , ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬರುವ ಎಲ್ಲ ವಿಮಾನಗಳನ್ನು ಕರ್ನಾಟಕ ತಾತ್ಕಾಲಿಕ ಸ್ಥಗಿತಗೊಳಿಸಿದೆ. ಮೇ. 25ರಂದು ದೇಶದಲ್ಲಿ ವಿಮಾನ ಸಂಚಾರ ಆರಂಭವಾದ ನಂತರ ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.

ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರದ ಜನರು ರಸ್ತೆ ಮೂಲಕವೂ ರಾಜ್ಯಕ್ಕೆ ಬರಬಾರದು ಎಂದು ನಿರ್ಬಂಧ ವಿಧಿಸಿದ್ದು ಮುಂದಿನ ನಿರ್ಧಾರ ಕೈಗೊಳ್ಳುವವರೆಗೆ ಇದೇ ನಿರ್ಧಾರಮುಂದುವರಿಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.

ಈ ರಾಜ್ಯಗಳಿಂದ ಬಂದ ಜನರಿಂದಾಗಿ ಸೋಂಕು ಲಕ್ಷಣಗಳು ಇಲ್ಲದೇ ಇರುವ ರೋಗಿಗಳ ಸಂಖ್ಯೆ ಜಾಸ್ತಿಯಾಗಿದೆ. ಹಾಗಾಗಿ ಕ್ವಾರಂಟೈನ್ ವ್ಯವಸ್ಥೆಯ ಹೊರೆಯೂ ಹೆಚ್ಚಾಗಿದೆ. ಈ ರಾಜ್ಯಗಳಿಂದ ಬರುವ ಜನರ ಸಂಖ್ಯೆ ಹೆಚ್ಚು ಇರುವುದರಿಂದ ನಿಗದಿತ ಸಮಯಕ್ಕೆ ಸೋಂಕು ಪರೀಕ್ಷೆ ನಡೆಸಲಾಗುತ್ತಿಲ್ಲ. ಹೊರಗಿನ ರಾಜ್ಯಗಳಿಂದ ಬರುವ ಜನರು ಕಡ್ಡಾಯ ಕ್ವಾರಂಟೈನ್ ಮುಗಿಸಿ ಮನೆಗೆ ಹೊರಟ ನಂತರ ಸರ್ಕಾರ ಈ ನಿರ್ಬಂಧಗಳನ್ನು ಸಡಿಲಿಕೆ ಮಾಡಲಿದೆ.

ಮಹಾರಾಷ್ಟ್ರದಿಂದ ಜನರು ನಡೆದುಕೊಂಡು ಬರದಂತೆ ತಡೆಯಲುಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ. ಭೀಮಾನದಿ ಒಣಗಿರುವ ಕಾರಣ ಜನರು ಕಾಲ್ನಡಿಗೆಯಿಂದಲೇ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ ಎಂದು ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT