ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಸಹಿತ ಹೊರ ರಾಜ್ಯಗಳಿಂದ ಬರೋವ್ರಿಗೂ 14 ದಿನ ಕ್ವಾರಂಟೈನ್ ಕಡ್ಡಾಯ

ಸೋಂಕಿನ ಲಕ್ಷಣ ಇಲ್ಲದಿದ್ರೂ ಕ್ವಾರಂಟೈನ್‌ಗೆ ಸಿದ್ಧರಾಗಿರಿ: ಕರ್ನಾಟಕ ಡಿಜಿಪಿ ಟ್ವೀಟ್
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರು 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೋಮವಾರ ಟ್ವೀಟ್ ಮಾಡಿದ್ದಾರೆ.

‘ದೆಹಲಿ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಬರುವವರು 14 ದಿನಗಳ ಕಾಲ ಸರ್ಕಾರ ಗೊತ್ತುಪಡಿಸಿದ ಕೇಂದ್ರಗಳಲ್ಲಿ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಸರ್ಕಾರದ ಪೋರ್ಟಲ್ ಸೇವಾ ಸಿಂಧು ಮೂಲಕ ಮಾತ್ರ ಪಾಸ್‌ಗಳನ್ನು ವಿತರಿಸಲಾಗುತ್ತದೆ. ತೀರಾ ಅಗತ್ಯವೆನಿಸಿದಲ್ಲಿ ಮಾತ್ರ ಪ್ರಯಾಣಿಸಿ. ಸೋಂಕಿನ ಲಕ್ಷಣಗಳು ಇಲ್ಲದಿದ್ದರೂ ಕ್ವಾರಂಟೈನ್‌ಗೆ ಒಳಗಾಗಲು ಸಿದ್ಧರಾಗಿರಿ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ಕೆಲವು ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಬರುವವರಿಗೆ ಕಡ್ಡಾಯ ಕ್ವಾರಂಟೈನ್ ಇದೆಯೇ? ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾಗಳಿಂದ ಕರ್ನಾಟಕಕ್ಕೆ ಬರಬಹುದೇ ಎಂದು ಅನೇಕರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT