ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ: ಕುಟುಂಬದ ಸದಸ್ಯರ ಸ್ಪರ್ಧೆ ಇಲ್ಲ -ದೇವೇಗೌಡ

Last Updated 12 ಸೆಪ್ಟೆಂಬರ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯ 17 ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌. ಡಿ. ದೇವೇಗೌಡ ಹೇಳಿದರು.

ಪಕ್ಷದ ಕಚೇರಿಯಲ್ಲಿ ಗುರುವಾರ ಪಕ್ಷದ ಅಧಿಕೃತ ವೆಬ್‌ಸೈಟ್‌ ಉದ್ಘಾಟಿಸಿ ಮಾತನಾಡಿದ ಅವರು,ಕೆ. ಆರ್. ಪೇಟೆ ಮತ್ತು ಹುಣಸೂರು ಕ್ಷೇತ್ರಗಳಲ್ಲಿ ಸಹಸ್ಥಳೀಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.

ಜಿ.ಟಿ. ದೇವೇಗೌಡರಿಗೆ ಉಂಟಾಗಿರುವ ಅಸಮಾಧಾನದ ಬಗ್ಗೆ ಪ್ರಸ್ತಾಪಿಸಿ, ‘ನಮ್ಮ ಪಕ್ಷಕ್ಕೆ ಸ್ವಾಭಿಮಾನ ಇದೆ, ಶಕ್ತಿ ಇದೆ, ದೈವ ಬಲವೂ ಇದೆ. ನಿಮ್ಮ ಕಣ್ಣು ಮುಂದೆಯೇ ಈ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ಅಲ್ಲಿಯವರೆಗೂ ನನಗೆ ದೇವರು ಆಯಸ್ಸು ಕೊಟ್ಟಿದ್ದಾನೆ.ನೀವು ಇನ್ನೂ ಚಿಕ್ಕವರು, ನನಗೀಗ 86 ವರ್ಷ. ನಮ್ಮ ಪಕ್ಷ ಒಂದು ದಿನ ಅಧಿಕಾರಕ್ಕೆ ಬರುತ್ತದೆ, ಆಗ ನಿಮ್ಮನ್ನು ಕರೆದುಒಳ್ಳೆಯ ಔತಣ ಕೊಡುತ್ತೇನೆ’ ಎಂದರು.

‘ಮೈತ್ರಿ ಬಗ್ಗೆ ಸ್ಥಳೀಯ ಕಾಂಗ್ರೆಸ್ ‌ನಾಯಕರ‌ ಭಾವನೆ ಏನಿದೆ ಎಂಬುದು ಗೊತ್ತಿಲ್ಲ. ಅವರ ಪಕ್ಷದ ನಾಯಕರು ಒಂದು ತೀರ್ಮಾನಕ್ಕೆ ಬಂದರೆ ಅದಕ್ಕೆ ನಮ್ಮ ಸಹಮತ ಇರುತ್ತದೆ’ ಎಂದು ಹೇಳಿದರು.

‘ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರ ಒಕ್ಕೂಟದ ಪ್ರತಿಭಟನೆಗೆ ನಾನು ಬೆಂಬಲ ನೀಡಿದ್ದೆ. ಅವರಿಗೆನಮ್ಮ ಬೆಂಬಲವಿದೆ. ಕುಮಾರಸ್ವಾಮಿ ಅವರು ಈಗಾಗಲೇ ಡಿಕೆಶಿ ತಾಯಿಯನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಇದರ ಬಗ್ಗೆ ಮಾಧ್ಯಮದ ಮೂಲಕ ಅವರ ನಿಲುವನ್ನು ತಿಳಿಸಿದ್ದಾರೆ. ಬುಧವಾರ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು’ ಎಂದರು.

ರಕ್ಷಣೆಗೆ ಒತ್ತಾಯ: ‘ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಸರ್ಕಾರ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT