ಭಾನುವಾರ, ಆಗಸ್ಟ್ 25, 2019
28 °C

ಜೈನ ಮಠ, ಜಯದೇವ ಆಸ್ಪತ್ರೆ ನೆರವು

Published:
Updated:

ಚನ್ನರಾಯಪಟ್ಟಣ: ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ವತಿಯಿಂದ ಆಹಾರ ಸಾಮಗ್ರಿ, ಔಷಧಿ ಸರಬರಾಜು ಮಾಡಲು ₹ 25 ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹ 10 ಲಕ್ಷ ಸೇರಿ 35 ಲಕ್ಷ ದೇಣಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಜೈನಮಠದ ಆಡಳಿತ ಮಂಡಳಿ ತಿಳಿಸಿದೆ.

ಸಂಕಷ್ಟಕ್ಕೆ ಒಳಗಾಗಿರುವವರಿಗೆ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಾಂತ್ವನ ಹೇಳಿದ್ದಾರೆ.

₹ 28 ಲಕ್ಷ ದೇಣಿಗೆ: ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಿಬ್ಬಂದಿಯ ಒಂದು ದಿನದ ವೇತನ ₹ 28 ಲಕ್ಷ ನೀಡಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವವರಿಗೆ ಸಹಾಯಹಸ್ತ ಚಾಚುವುದು ನಮ್ಮೆಲ್ಲರ ಕರ್ತವ್ಯ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಭಾನುವಾರ ಮೈಸೂರಿನಲ್ಲಿ ತಿಳಿಸಿದರು.

ಕೆಎಸ್‌ಆರ್‌ಟಿಸಿ ನೌಕರರ ನೆರವು

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ತಮ್ಮ ಒಂದು ದಿನದ ವೇತನವನ್ನು ನೆರೆ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ. 

‘ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ನೌಕರರ ಒಕ್ಕೂಟದ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನೌಕರರ ಆಗಸ್ಟ್‌ ತಿಂಗಳಿನಲ್ಲಿ ಒಂದು ದಿನದ ಸಂಬಳವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಕಳುಹಿಸಬೇಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ವಿನಂತಿಸಿಕೊಳ್ಳಲಾಗಿದೆ’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಅನಂತ ಸುಬ್ಬರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post Comments (+)