ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರುನಿಯುಕ್ತಿ ಆದೇಶ ತಡೆಹಿಡಿಯಲು ಸುತ್ತೋಲೆ

Last Updated 2 ಮಾರ್ಚ್ 2019, 18:25 IST
ಅಕ್ಷರ ಗಾತ್ರ

ಬೆಂಗಳೂರು: ಹಿಂಬಡ್ತಿಗೆ ಒಳಗಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರನ್ನು ಅದೇ ಹುದ್ದೆಗೆ ಮರುನಿಯುಕ್ತಿಗೊಳಿಸಿ ಹೊರಡಿಸಿದ್ದ ಆದೇಶವನ್ನು ಜಾರಿಗೊಳಿಸದಂತೆ ಸುತ್ತೋಲೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೊಸ ಬಡ್ತಿ ಮೀಸಲು ಕಾಯ್ದೆ ಅನ್ವಯ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆಯಾಜ್ಞೆ ನೀಡಿತ್ತು. ಕೋರ್ಟ್‌ ತೀರ್ಪಿನ ಪ್ರತಿ ಶನಿವಾರ ತಲುಪಿದ್ದು, ಅದರಲ್ಲಿರುವ ಅಂಶಗಳನ್ನು ಉಲ್ಲೇಖಿಸಿ ಅದರಂತೆ ಕ್ರಮ ತೆಗೆದುಕೊಳ್ಳಲು ಮಂಗಳವಾರ ಸುತ್ತೋಲೆ ಹೊರಡಿಸಲಾಗುವುದು ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಗೃಹ ಸೇರಿದಂತೆ ಕೆಲವು ಇಲಾಖೆಗಳಲ್ಲಿ ಉನ್ನತ ಹುದ್ದೆಗಳಿಂದ ಕೆಳಹಂತಕ್ಕೆ ಅಧಿಕಾರಿಗಳನ್ನು ಹಿಂಬಡ್ತಿಗೊಳಿಸಿ ಹೊರಡಿಸಿದ್ದ ಆದೇಶವನ್ನು ಮರು ನಿಯುಕ್ತಿ ಆದೇಶ ಹೊರಬಿದ್ದ ತಕ್ಷಣವೇ ರದ್ದುಪಡಿಸಲಾಗಿತ್ತು. ಇದರಿಂದಾಗಿ ಹಲವು ಅಧಿಕಾರಿಗಳು ಹಿಂಬಡ್ತಿ ಪೂರ್ವದಲ್ಲಿದ್ದ ಹುದ್ದೆಗೆ ಮರಳಲು ತಯಾರಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT