ಶನಿವಾರ, ಜುಲೈ 31, 2021
28 °C
ಶೇ 50ರಷ್ಟು ಹಾಸಿಗೆ ಸರ್ಕಾರಕ್ಕೆ ಮೀಸಲಿಡುವುದು ಕಡ್ಡಾಯ

ಕೋವಿಡ್: ಖಾಸಗಿ ಆಸ್ಪತ್ರೆಗಳ ದರ ನಿಗದಿಪಡಿಸಿ ಸರ್ಕಾರ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

coronavirus

ಬೆಂಗಳೂರು: ಬೆಂಗಳೂರು ಸಹಿತ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವಂತೆಯೇ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸುವ ಚಿಕಿತ್ಸಾ ದರವನ್ನು ನಿಗದಿಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಖಾಸಗಿ ಆಸ್ಪತ್ರೆಗಳ ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ಮೀಸಲಿಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಈ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಕಳುಹಿಸುವ ರೋಗಿಗಳಿಗೆ ದಿನಕ್ಕೆ ಜನರಲ್ ವಾರ್ಡ್‌ಗೆ ₹ 5,000, ಎಚ್ಡಿಯು ₹ 7,000, ಐಸಿಯು ₹8,500 ಹಾಗೂ ವೆಂಟಿಲೇಟರ್ ಇರುವ ಐಸಿಯುಗೆ ₹10,000 ದರ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 

ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಒಳಪಟ್ಟರೆ ಅವರಿಂದ ಜನರಲ್ ವಾರ್ಡ್‌ಗೆ ದಿನಕ್ಕೆ ₹10,000, ಎಚ್ಡಿಯು ₹ 12,000, ಐಸಿಯು ₹15,000 ಹಾಗೂ ವೆಂಟಿಲೇಟರ್ ಸಹಿತ ಐಸಿಯುಗೆ ₹25,000ಕ್ಕಿಂತ ಅಧಿಕ ಶುಲ್ಕ ವಿಧಿಸುವಂತಿಲ್ಲ ಎಂದು ತಿಳಿಸಲಾಗಿದೆ.

ಸುವರ್ಣ ಸುರಕ್ಷಾ ಆರೋಗ್ಯ ಟ್ರಸ್ಟ್ ಬಿಲ್ ಪಾವತಿಯ ನೋಡಲ್ ಏಜೆನ್ಸಿಯಾಗಿದ್ದು, ಬಿಪಿಎಲ್, ಎಪಿಎಲ್, ವಲಸೆ ಕಾರ್ಮಿಕರು ಮತ್ತು ಪಡಿತರ ಚೀಟಿ ಇಲ್ಲದೆ ಇತರ ರಾಜ್ಯಗಳಿಂದ ಮರಳಿದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಟ್ರಸ್ಟ್ ವಹಿಸಿಕೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು