ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋನ್ ಕದ್ದಾಲಿಕೆ: ಸಿಬಿಐ ತನಿಖೆಗೆ ಸರ್ಕಾರ ಅಧಿಕೃತ ಆದೇಶ

Last Updated 20 ಆಗಸ್ಟ್ 2019, 1:08 IST
ಅಕ್ಷರ ಗಾತ್ರ

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದೆ. ಸೋಮವಾರ ಅಧಿಕೃತ ಆದೇಶ ಹೊರ ಬಿದ್ದಿದೆ.

1–8–2018ರಿಂದ 19–8–2019ರ ಅವಧಿಯವರೆಗೆ ತನಿಖೆ ನಡೆಸುವಂತೆ ಆದೇಶದಲ್ಲಿ ಕೋರಲಾಗಿದೆ. ರಾಜಕೀಯ ಮುಖಂಡರು, ಅವರ ಸಂಬಂಧಿಕರು ಹಾಗೂ ಅಧಿಕಾರಿಗಳ ಫೋನ್ ಕದ್ದಾಲಿಕೆ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಆದೇಶದಲ್ಲಿ ಹೇಳಲಾಗಿದೆ.

ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರ ಶಿಫಾರಸಿನ ಅನ್ವಯ ಈ ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಡಳಿತ ಹಾಗೂ ವಿರೋಧ ಪಕ್ಷಗಳ ಕೆಲವು ನಾಯಕರ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ‍ಪ್ರಕರಣ ರಾಜ್ಯ ರಾಜಕೀಯ ವಲಯದಯಲ್ಲಿ ಕೋಲಾಹಲ ಸೃಷ್ಟಿಸಿತ್ತು. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗ ಸಿಬಿಐಗೆ ಹಸ್ತಾಂತರವಾಗಲಿದೆ.

ಫೋನ್ ಕದ್ದಾಲಿಕೆಗೆ ಸಂಬಂಧಿಸಿದಂತೆ ಸಿಬಿಐಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಹಾಗೂ ಡೇಟಾಗಳನ್ನು ವರ್ಗಾಯಿಸುವಂತೆ ಸಂಬಂಧಿಸಿದ ಇಲಾಖೆಗಳು ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಫೋನ್‌ ಕದ್ದಾಲಿಕೆ ವಿಚಾರ ರಾಜಕೀಯ ನಾಯಕರ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT