ಏರ್ ಶೋ ಬೆಂಕಿ ಅವಘಡ: ರಕ್ಷಣಾ ಇಲಾಖೆಗೆ ತುರ್ತು ನೋಟಿಸ್ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಯಲಹಂಕದಲ್ಲಿ ಕಳೆದ ವರ್ಷ ನಡೆದಿದ್ದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಂದರ್ಭ ವಾಹನ ನಿಲುಗಡೆ ಜಾಗದಲ್ಲಿ ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರಕ್ಷಣಾ ಇಲಾಖೆಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ದಸರಾ ರಜಾ ಕಾಲದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಎಚ್ಎಎಲ್, ಡಿಐಜಿ (ಅಗ್ನಿಶಾಮಕ ಮತ್ತು ತುರ್ತು ಸೇವೆ) ಹಾಗೂ ನಗರ ಪೊಲೀಸ್ ಆಯುಕ್ತರಿಗೆ ತುರ್ತು ನೊಟೀಸ್ ಜಾರಿಗೊಳಿಸಲು ಆದೇಶಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ವರದಿ ನೀಡುವಂತೆಯೂ ಸೂಚಿಸಲಾಗಿದೆ.
ಸಂತ್ರಸ್ತರ ಪರಿಹಾರ ಯೋಜನೆ ಜಾರಿಗೆ ಸೂಚನೆ: ಈ ಹಿಂದೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ಅನುಗುಣವಾಗಿ ಕ್ರಿಮಿನಲ್ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಕಡ್ಡಾಯವಾಗಿ ಪರಿಹಾರ ಘೋಷಣೆ ಮಾಡುವ ಮೂಲಕ ಸಂತ್ರಸ್ತರ ಪರಿಹಾರ ಯೋಜನೆ ಜಾರಿ ಮಾಡಬೇಕು ಎಂದು ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ನಿರ್ದೇಶಿಸಿ ರಿಜಿಸ್ಟ್ರಾರ್ ಜನರಲ್ ಸುತ್ತೋಲೆ ಹೊರಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.