ಮಂಗಳವಾರ, ಮೇ 26, 2020
27 °C

ಮಸೀದಿ ಪ್ರಾರ್ಥನೆ: ಕೇಂದ್ರದ ಆದೇಶ ಪಾಲಿಸಲು ವಕ್ಫ್ ಮಂಡಳಿಗೆ ಹೈಕೋರ್ಟ್ ತಾಕೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Karnataka high court

ಬೆಂಗಳೂರು: ‘ಮಸೀದಿಗಳಲ್ಲಿ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದನ್ನು ನಿಯಂತ್ರಿಸುವ ಬಗ್ಗೆ ವಕ್ಫ್ ಮಂಡಳಿ ಕ್ರಮ ಕೈಗೊಳ್ಳಲು ಮುಂದಾಗಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಕೊರೊನಾ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತು ನಿರ್ದೇಶನ ನೀಡಿದೆ.

‘ಕೊರೊನಾ ಸೋಂಕು ಹರಡುವುದನ್ನು ತಡೆಯುವ ದಿಸೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ 2020ರ ಮಾರ್ಚ್ 24ರಂದು ಎಲ್ಲ ವಿಧದ ಧಾರ್ಮಿಕ ಆರಾಧನೆಯ ಜಮಾವಣೆ  ಪ್ರತಿಬಂಧಿಸಲು ಮತ್ತು ಎಲ್ಲ ಆರಾಧನಾ ಸ್ಥಳಗಳನ್ನು ಬಂದ್ ಮಾಡಲು ನಿರ್ದೇಶಿಸಿದೆ. ನಿರ್ದೇಶನವನ್ನು ರಾಜ್ಯ ವಕ್ಫ್ ಮಂಡಳಿ ಗಮನದಲ್ಲಿ ಇರಿಸಿಕೊಳ್ಳಬೇಕು’  ಎಂದು ನ್ಯಾಯಪೀಠ ತಾಕೀತು ಮಾಡಿದೆ.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ  ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು