ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂದಿಗಳಿಗೆ ಸ್ಥಳ ಗುರುತಿಸಿ ಹೈಕೋರ್ಟ್ ಆದೇಶ

Last Updated 29 ಏಪ್ರಿಲ್ 2019, 18:56 IST
ಅಕ್ಷರ ಗಾತ್ರ

ಬೆಂಗಳೂರು: ‘ಹಂದಿ ಸಾಕಣೆದಾರರಿಗೆ ಅನುಕೂಲವಾಗುವಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸೂಕ್ತ ಸ್ಥಳ ಗುರುತಿಸಿ’ ಎಂದು ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರಸಭೆಗಳಿಗೆ ಹೈಕೋರ್ಟ್‌ ಆದೇಶಿಸಿದೆ.

‘ಈ ರೀತಿ ಗುರುತಿಸುವ ಜಾಗಗಳಲ್ಲಿ ಹಂದಿಗಳಿಗೆ ಅಗತ್ಯವಾದ ನೀರು ಮತ್ತು ಮೂಲಸೌಕರ್ಯ ಇರುವಂತೆ ನೋಡಿಕೊಳ್ಳಿ. ಹಂದಿ ಸಾಕಣೆ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ ಅವುಗಳ ಪಾಲಕರಿಗೆ ಶಿಕ್ಷಣ ನೀಡಿ’ ಎಂದು ಹಂಗಾಮಿಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ನಿರ್ದೇಶಿಸಿದೆ.

‘ಸಂವಿಧಾನದ ಆಶಯಗಳ ಅನುಸಾರ ವಂಚಿತ ವರ್ಗವನ್ನು ಮೇಲೆತ್ತಬೇಕಾದರೆ ಅವರಿಗೆ ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ದೊರೆಯಬೇಕು. ಈ ಆಶಯ ಈಡೇರಿದರೆ ರಾಜಕೀಯ ನ್ಯಾಯ ಪಡೆಯಲು ಸಾಧ್ಯ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ದಾವಣಗೆರೆಯಲ್ಲಿ ಬೀಡಾಡಿಹಂದಿಗಳಿಂದ ಸಾರ್ವಜನಿಕರಿಗೆ ಉಪದ್ರವ ಉಂಟಾಗುತ್ತಿದ್ದು ಇವುಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು’ ಎಂಬ ಪಾಲಿಕೆ ಆದೇಶವನ್ನು ಪ್ರಶ್ನಿಸಿ ‘ಅಖಿಲ ಕರ್ನಾಟಕ ಕುಳುವ ಮಹಾಸಂಘ’ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT