ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9.74 ಲಕ್ಷ ಮನೆಗಳಿಗೆ ₹10,194 ಕೋಟಿ ಅನುದಾನಕ್ಕೆ ಕ್ರಮ: ಯಡಿಯೂರಪ್ಪ

Last Updated 1 ಜೂನ್ 2020, 11:43 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣದ ವಿವಿಧ ಹಂತಗಳಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ₹10,194 ಕೋಟಿ ಅನುದಾನದ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.

ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಮಾಡಿ ಸರ್ಕಾರ ₹8,000 ಕೋಟಿ ಉಳಿತಾಯ ಮಾಡಲಾಗಿದೆ. ಇದು ಶ್ಲಾಘನೀಯ ಕಾರ್ಯ. ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಿರುವ ವಿಜಿಲ್‌ ಆ್ಯಪ್‌ ತಂತ್ರಾಂಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಅತಿ ಬೇಗನೆ ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಕೆಗ ವಿತರಿಸಲು ಗುರುತಿಸಲಾಗಿದೆ. ಇದಕ್ಕಾಗಿ ₹100 ಕೋಟಿ ಲಭ್ಯವಿದೆ. ನಿವೇಶಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು ₹1,000 ಕೋಟಿ ಅಗತ್ಯವಿದೆ ಎಂದು ವಸತಿ ಸಚಿವ ವಿಸೋಮಣ್ಣ ಹೇಳಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದು ಎಂದು ಸಚಿವರು ಸಲಹೆ ನೀಡಿದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು ₹ 1264 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4000 ಕ್ಕಿಂತ ಹೆಚ್ಚು ದೂರುಗಳು ದಾಖಲಾಗಿದ್ದು ಸುಮಾರು 700 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT