ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಕೋವಿಡ್‌–19 ಸೋಂಕು ಪತ್ತೆ ಪರೀಕ್ಷಾ ಸಾಮರ್ಥ್ಯ ವೃದ್ಧಿ: ಸುಧಾಕರ್‌

Last Updated 21 ಮೇ 2020, 5:30 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷಾ ಸಾಮರ್ಥ್ಯವನ್ನು ಕರ್ನಾಟಕ ಹೆಚ್ಚಿಸಿಕೊಳ್ಳುತ್ತಿದ್ದು, ಬುಧವಾರ ಅತ್ಯಧಿಕ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಅವರು ‘ಕರ್ನಾಟಕವು ಕೋವಿಡ್–19 ಪರೀಕ್ಷೆಯಲ್ಲಿ ತನ್ನ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸಿಕೊಳ್ಳುತ್ತಿದೆ. ನಿನ್ನೆ (ಬುಧವಾರ) 7293 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಈ ವರಗಿನ ಒಂದು ದಿನದ ಅತ್ಯಧಿಕ ಪರೀಕ್ಷೆಯಾಗಿದೆ. ಇಂದಿಗೆ ರಾಜ್ಯದಲ್ಲಿ 53 ಪರೀಕ್ಷಾ ಲ್ಯಾಬ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಮೇ ಅಂತ್ಯದ ವೇಳೆಗೆ 60 ಲ್ಯಾಬ್‌ಗಳನ್ನು ಹೊಂದುವ ಗುರಿಯನ್ನು ನಾವು ತಲುಪಲಿದ್ದೇವೆ,’ ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌–19 ನಿಯಂತ್ರಣದಲ್ಲಿ ಸೋಂಕು ಪತ್ತೆ ಪರೀಕ್ಷೆಯೂ ಮಹತ್ವದ್ದು. ಹೆಚ್ಚು ಲ್ಯಾಬ್‌ಗಳ ಮೂಲಕ ಹೆಚ್ಚು ಹೆಚ್ಚು ಪರೀಕ್ಷೆಗಳು ನಡೆಯಬೇಕಿರುವುದು ಇಂದಿನ ಅಗತ್ಯ ಎಂಬುದು ತಜ್ಞರ ಅಭಿಪ್ರಾಯವೂ ಹೌದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT