ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು, ಮೈಸೂರು ಕೊರೊನಾ ಹಾಟ್‌ಸ್ಪಾಟ್‌ಗಳು: ಚಿಕ್ಕಬಳ್ಳಾಪುರ ಸಹ ಸೇರ್ಪಡೆ

Last Updated 1 ಏಪ್ರಿಲ್ 2020, 7:41 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್‌ ಸೊಂಕು ಹರಡುತ್ತಿರುವ 25 ಸೂಕ್ಷ್ಮ ಪ್ರದೇಶಗಳನ್ನು ಕೇಂದ್ರ ಆರೋಗ್ಯ ಇಲಾಖೆ ಗುರುತಿಸಿದ್ದು, ಅವುಗಳಲ್ಲಿ ಬೆಂಗಳೂರು ನಗರ ಮತ್ತು ಮೈಸೂರು ಸೇರಿವೆ. ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ನಗರಗಳ ಪೈಕಿ ಬೆಂಗಳೂರು ಟಾಪ್‌ 7ರಲ್ಲಿದೆ.

ಬೆಂಗಳೂರು, ಮೈಸೂರು ಅಲ್ಲದೇ ಕಳೆದ 14 ದಿನಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುತ್ತಿರುವ ಹೊಸ ಕೇಂದ್ರವಾಗಿ ಚಿಕ್ಕಬಳ್ಳಾಪುರ ಗುರುತಿಸಲಾಗಿದೆ. ಭಾರತದಲ್ಲಿ ಶೇ 80ರಷ್ಟು ಕೋವಿಡ್‌–19 ಪ್ರಕರಣಗಳು ದಾಖಲಾಗಿರುವ 10 ರಾಜ್ಯಗಳ ಪೈಕಿ ಕರ್ನಾಟಕ ಸಹ ಇದೆ. ಕರ್ನಾಟಕದಲ್ಲಿ ಮಂಗಳವಾರದ ವರೆಗೂ ಒಟ್ಟು 102 ಸೋಂಕು ಪ್ರಕರಣಗಳು ವರದಿಯಾಗಿವೆ.

ಕರ್ನಾಟಕದೊಂದಿಗೆ ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ತೆಲಂಗಾಣ, ಗುಜರಾತ್‌, ತಮಿಳುನಾಡು ಹಾಗೂ ಪಂಜಾಬ್‌ ರಾಜ್ಯಗಳಿಂದ ದೇಶದ ಶೇ 80ರಷ್ಟು ಕೋವಿಡ್‌–19 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು, ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದರಿಂದ ಕರ್ನಾಟಕ ಇನ್ನಷ್ಟು ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದೆ.

ಬೆಂಗಳೂರಿನಲ್ಲಿ ಸೋಂಕು ದೃಢಪಟ್ಟಿರುವ 45 ಪ್ರಕರಣಗಳು ದಾಖಲಾಗಿದ್ದು, 30ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿರುವ ನಗರಗಳ ಪೈಕಿ ಏಳನೇ ಸ್ಥಾನದಲ್ಲಿದೆ. ಮಂಗಳವಾರದ ವರೆಗೂ ಏಳು ಮಂದಿ ಗುಣಮುಖರಾಗಿದ್ದಾರೆ ಹಾಗೂ ಒಬ್ಬ ವ್ಯಕ್ತಿ ಮೃತ ಪಟ್ಟಿದ್ದಾರೆ. ಕಳೆದ 14 ದಿನಗಳಲ್ಲಿ ಬೆಂಗಳೂರಿನಲ್ಲಿ 23 ಪ್ರಕರಣಗಳು ದಾಖಲಾಗಿವೆ. ಇನ್ನೂ ಮೈಸೂರಿನಲ್ಲಿ 14 ಹಾಗೂ ಚಿಕ್ಕಬಳ್ಳಾಪುರದಲ್ಲಿ 9 ಪ್ರಕರಣಗಳು ವರದಿಯಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಮೈಸೂರಿನ ಔಷಧ ತಯಾರಿಸುವ ಕಂಪನಿಯ ಸಿಬ್ಬಂದಿಗಳ ಪೈಕಿ 12 ಜನರಲ್ಲಿ ಸೋಂಕು ದೃಢಪಟ್ಟಿದೆ. ಆದರೆ, ಅವರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಮನೆಯಲ್ಲಿ ಪ್ರತ್ಯೇಕ ವಾಸದಲ್ಲಿರುವವರು (ಹೋಂ ಕ್ವಾರಂಟೈನ್‌) ನಿತ್ಯ 14 ಸೆಲ್ಫಿ ಕಳಿಹಿಸುವಂತೆ ಕರ್ನಾಟಕ ಸರ್ಕಾರ ಸೂಚಿಸಿದೆ. ಬೆಳಿಗ್ಗೆ 7ರಿಂದ 9ರ ವರೆಗೂ ಪ್ರತಿ ಗಂಟೆಗೆ ಒಂದು ಸೆಲ್ಫಿ ಕ್ಲಿಕ್ಕಿಸಿ ಕಳುಹಿಸಬೇಕಿದೆ. ಇದಕ್ಕಾಗಿ ಕ್ವಾರಂಟೈನ್‌ ವಾಚ್‌ ಆ್ಯಪ್‌ ಬಳಸುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆಯ ಪ್ರಕಾರ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 15 ಐಸಿಯು ಬೆಡ್‌ಗಳು, 20 ವೆಂಟಿಲೇಟರ್‌ಗಳು ಹಾಗೂ 1,200 ಐಸೊಲೇಷನ್‌ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT