ಬುಧವಾರ, ಫೆಬ್ರವರಿ 26, 2020
19 °C

ಪಕ್ಷೇತರ ಶಾಸಕರ ಅರ್ಜಿ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸಮ್ಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಂಡ ಕಾರಣ ಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್‌ ತರಾಟೆಗೆ ತೆಗೆದುಕೊಂಡರು.  

‘ನಿಮಗೆ ಬೇಕಾದಾಗ ನಾವು ಹಗಲು ರಾತ್ರಿ ವಿಚಾರಣೆ ನಡೆಸಬೇಕು. ನಾವು ಕರೆದಾಗ ನೀವು ಬರುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ ಪ್ರಕರಣ ಇತ್ಯರ್ಥಕ್ಕೆ ಒಪ್ಪಿಗೆ ನೀಡಿದೆ.

‘ಅರ್ಜಿ ವಾಪಾಸ್ ಪಡೆಯುವುದಾದರೆ ಅಭ್ಯಂತರವಿಲ್ಲ’
ಪಕ್ಷೇತರ ಶಾಸಕರು ಸಲ್ಲಿಸಿರುವ ಅರ್ಜಿಯನ್ನು ವಾಪಾಸ್ ಪಡೆಯುವುದಾದರೆ ನಮ್ಮ ಅಭ್ಯಂತರವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ತಿಳಿಸಿದ್ದಾರೆ. 

ಪ್ರಕರಣದ ವಿಚಾರಣೆ ನಡೆಸಿ ಇಂದು ಆದೇಶ ನೀಡುವುದಾಗಿ ನ್ಯಾಯಪೀಠ ತಿಳಿಸಿದೆ. 

ತ್ವರಿತವಾಗಿ ವಿಶ್ವಾಸಮತ ಯಾಚನೆ‌ ಆಗಲಿ ಎಂದು ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಸುಪ್ರೀಂಕೋರ್ಟ್‌ ಮೊರೆ‌ ಹೋಗಿದ್ದ‌ರು. 

ಬುಧವಾರ ಅರ್ಜಿ ಹಿಂಪಡೆಯುವುದಾಗಿ ಪಕ್ಷೇತರ ಶಾಸಕರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದರು.

ಇನ್ನಷ್ಟು... 

ಜುಲೈ 22 ‘ನಾಳೆ ನೋಡೋಣ’ ರಾಜಕೀಯ ವಿದ್ಯಮಾನ, ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಕಾರ

ಸುಪ್ರೀಂ ಕೋರ್ಟ್‌ ನೆರವಿನ ನಿರೀಕ್ಷೆಯಲ್ಲಿ ‘ದೋಸ್ತಿ’ಗಳು 

ಸುಪ್ರೀಂ ತೀರ್ಪು: ಇವರು ಹೀಗೆ ಹೇಳಿದರು 

ಕಾನೂನಾತ್ಮಕ ಗೊಂದಲ ಹೆಚ್ಚಿಸಿದ ಸುಪ್ರೀಂ ಕೋರ್ಟ್ ತೀರ್ಪು 

‘ನನ್ನ ಭೇಟಿಗೆ ಸುಪ್ರೀಂ ಕೋರ್ಟ್‌ ಅನುಮತಿ ಬೇಕಾ’ 

ರಾಜೀನಾಮೆಯನ್ನು ಕಾಲಮಿತಿಯಲ್ಲಿ ಸ್ಪೀಕರ್‌ ನಿರ್ಧರಿಸಬೇಕು: ಸುಪ್ರೀಂ ತೀರ್ಪು 

ರಾಜೀನಾಮೆ, ಅನರ್ಹತೆ ಯಥಾಸ್ಥಿತಿಗೆ ‘ಸುಪ್ರೀಂ’ ಆದೇಶ 

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ: ಇಲ್ಲಿದೆ ಈವರೆಗಿನ ಸಮಗ್ರ ಮಾಹಿತಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು