ಭಾನುವಾರ, ಡಿಸೆಂಬರ್ 8, 2019
21 °C

ಮುನಿಸಿಕೊಂಡು ಮುಂಬೈಗೆ ಹೋಗಿದ್ದ ಶಾಸಕರು ಅನರ್ಹ: ಸ್ಪೀಕರ್ ರಮೇಶ್‌ಕುಮಾರ್ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈತ್ರಿ ಸರ್ಕಾರದೊಂದಿಗೆ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದ ಎಲ್ಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅನರ್ಹಗೊಂಡಿದ್ದಾರೆ. ಇದರಿಂದ ಈವರೆಗೆ ಒಟ್ಟು 17 ಶಾಸಕರು ಅನರ್ಹಗೊಂಡಂತೆ ಆಗಿದ್ದು, ರಾಜ್ಯದ ರಾಜಕೀಯ ಬೆಳವಣಿಗೆ ಮತ್ತೊಮ್ಮೆ ದೇಶದ ಗಮನ ಸೆಳೆದಿದೆ.

ವಿಧಾನಸೌಧದಲ್ಲಿ ಭಾನುವಾರ ಮುಂಜಾನೆ 11 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ರಮೇಶ್‌ಕುಮಾರ್ ಅನರ್ಹಗೊಂಡ ಶಾಸಕರ ಪಟ್ಟಿ ಓದಿದರು.

ಕಾಂಗ್ರೆಸ್ ಶಾಸಕರಾದ ಪ್ರತಾಪ್‌ ಗೌಡ ಪಾಟೀಲ (ಮಸ್ಕಿ), ಬಿ.ಸಿ.ಪಾಟೀಲ (ಹಿರೇಕೆರೂರ), ಶಿವರಾಮ ಹೆಬ್ಬಾರ (ಯಲ್ಲಾಪುರ), ಎಸ್‌.ಟಿ.ಸೋಮಶೇಖರ್ (ಯಶವಂತಪುರ), ಬಿ.ಎ.ಬಸವರಾಜ (ಕೆ.ಆರ್.ಪುರ), ಆನಂದ್‌ ಸಿಂಗ್ (ವಿಜಯನಗರ ಬಳ್ಳಾರಿ), ಆರ್.ರೋಶನ್‌ಬೇಗ್ (ಶಿವಾಜಿನಗರ), ಮುನಿರತ್ನ (ರಾಜರಾಜೇಶ್ವರಿನಗರ), ಡಾ.ಕೆ.ಸುಧಾಕರ (ಚಿಕ್ಕಬಳ್ಳಾಪುರ), ಎಂ.ಟಿ.ಬಿ.ನಾಗರಾಜ್ (ಹೊಸಕೋಟೆ), ಶ್ರೀಮಂತ ಬಾಳಾಸಾಹೇಬ್ ಪಾಟೀಲ್ (ಕಾಗವಾಡ) ಮತ್ತು ಜೆಡಿಎಸ್ ಶಾಸಕರಾದ ಎ.ಎಚ್.ವಿಶ್ವನಾಥ್ (ಹುಣಸೂರು), ಕೆ.ಸಿ.ನಾರಾಯಣಗೌಡ (ಕೆ.ಆರ್.ಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್) ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ರಮೇಶ್‌ಕುಮಾರ್ ಹೇಳಿದರು.

ಗುರುವಾರವಷ್ಟೇ (ಜುಲೈ 25) ಶಾಸಕರಾದ ಮಹೇಶ್ ಕುಮಠಳ್ಳಿ (ಅಥಣಿ), ರಮೇಶ ಜಾರಕಿಹೊಳಿ (ಗೋಕಾಕ), ಆರ್.ಶಂಕರ್ (ರಾಣೆಬೆನ್ನೂರು) ಅವರನ್ನು ಅನರ್ಹಗೊಳಿಸಿ ರಮೇಶ್‌ಕುಮಾರ್ ಆದೇಶಿಸಿದ್ದರು.

‘ಸ್ಪೀಕರ್ ಆಗಿರುವ ಕಾರಣಕ್ಕೆ ನನ್ನ ಮೇಲೆ ಮಾನಸಿಕ ಒತ್ತಡ ಹಾಕಲಾಗಿದೆ. ಖಿನ್ನನಾಗಿದ್ದಾನೆ. ಇದು ನನ್ನ ನಾಲ್ಕು ದಶಕಗಳ ಜೀವನದ ಪ್ರಮುಖ ಘಟ್ಟ, ಬಹುಶಃ ಕೊನೆಯ ಘಟ್ಟವೂ ಆಗಬಹುದು. ಅತ್ಯಂತ ಭಯ, ಗೌರವ, ಜವಾಬ್ದಾರಿಯನ್ನು ಹೊಟ್ಟೆಯಲ್ಲಿಟ್ಟುಕೊಂಡು ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ’ ಎಂದು ರಮೇಶ್‌ಕುಮಾರ್ ತೀರ್ಪು ಓದಿದರು.

ನಾಳೆ ಯಡಿಯೂರಪ್ಪ ವಿಶ್ವಾಸಮತ

ಸೋಮವಾರ ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದರು. ಅದರಂತೆ ನನ್ನ ಕಾರ್ಯದರ್ಶಿಯ ಮೂಲಕ ಎಲ್ಲ ಶಾಸಕರಿಗೂ ಕರೆ ಕಳಿಸಲಾಗಿದೆ ಎಂದು ರಮೇಶ್‌ ಕುಮಾರ್ ಹೇಳಿದರು.

‘ನಾಳೆಯ ಅಧಿವೇಶನದಲ್ಲಿ ಯಡಿಯೂರಪ್ಪ ಅವರ ವಿಶ್ವಾಸಮತ ಯಾಚನೆ, ಧನ ವಿನಿಯೋಗ ಮಸೂದೆಯ ಚರ್ಚೆ, ಪರಿಶೀಲನೆ ಮತ್ತು ಮತಕ್ಕೆ ಹಾಕುವ ಪ್ರಕ್ರಿಯೆಗಳು ನಡೆಯಲಿವೆ. ಧನವಿನಿಯೋಗ ಮಸೂದೆಯು ಜುಲೈ 31ರ ಒಳಗೆ ಸದನದ ಅನುಮೋದನೆ ಮತ್ತು ರಾಜ್ಯಪಾಲರ ಸಹಿ ಪಡೆಯಬೇಕು. ಇಲ್ಲದಿದ್ದರೆ ಆಡಳಿತ ಸ್ಥಗಿತಗೊಳ್ಳುತ್ತದೆ’ ಎಂದು ತಿಳಿಸಿದರು.

ಜೈಪಾಲರೆಡ್ಡಿ ನೆನೆದು ಕಣ್ಣೀರಿಟ್ಟ ಸ್ಪೀಕರ್

ಇದು ನನಗೆ ಅತ್ಯಂತ ಖೇದದ ದಿನ. ನನ್ನ ಹಿರಿಯ ಸೋದರರಂತಿದ್ದ ಜೈಪಾಲ್ ರೆಡ್ಡಿ ನಿಧನರಾಗಿದ್ದಾರೆ. ನನಗೆ ತೀವ್ರ ಬೇಸರವಾಗಿದೆ. ಅವರು ಒಬ್ಬ ಒಳ್ಳೆಯ ಮನುಷ್ಯ, ಸಂಸದೀಯಪಟು ಆಗಿದ್ದರು ಎಂದು ರಮೇಶ್‌ಕುಮಾರ್ ನೆನೆದರು.

ಪಕ್ಷಾಂತರ ನಿಷೇಧ ಕಾಯ್ದೆ ಸಂಸತ್ತಿನಲ್ಲಿ ಮಂಡನೆಯಾದಾಗ ಜೈಪಾಲ್ ರೆಡ್ಡಿ ಮನದ ಮಾತುಗಳನ್ನು ಹೇಳಿದ್ದರು. ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ, ಮುಧುಲಿಮೆ, ಮೋಹನ್ ಕುಮಾರ್ ಮಂಗಳಂ, ಇಂದ್ರಜಿತ್ ಗುಪ್ತ, ಚಂದ್ರಜಿತ್ ಯಾದವ್, ಜಾರ್ಜ್ ಫರ್ನಾಂಡಿಸ್ ಅವರಂಥವರನ್ನು ನೆನೆಯಬೇಕು. ಅಬ್ದುಲ್ ನಜೀರ್ ಸಾಬ್, ಬಿ.ಎ.ಮೊಯಿದ್ದೀನ್, ಎ.ಕೆ.ಸುಬ್ಬಯ್ಯ ಅವರಂಥವರಿಂದ ನಾನು ಪ್ರಭಾವಿತನಾಗಿದ್ದೇನೆ.

ಇನ್ನಷ್ಟು...

ಯಡಿಯೂರಪ್ಪಗೆ ಮತ್ತೆ ಎದುರಾಗುತ್ತಾ ದಶಕದ ಹಿಂದಿನ ಸವಾಲು?

‘ಮೈತ್ರಿ vs ಬಿಜೆಪಿ’ ಮುಖ್ಯಮಂತ್ರಿ ಕಪ್ ಪಂದ್ಯಾವಳಿ: ಫೈನಲ್ ಹೀಗಾಯ್ತು...​

ಇಂಥ ರಾಜಕೀಯ ಮಾಡಿ ನೀವು ಸಾಧಿಸಿದ್ದೇನು?

ಇನ್ನಾದರೂ ಕೊನೆಯಾದೀತೆ ರಾಜಕೀಯ ಅಸ್ಥಿರತೆ?

ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ

ಸೌಧದಲ್ಲಿ ವಿಲವಿಲ, ಮೀಮ್‌ಗಳಲ್ಲಿ ಕಿಲಕಿಲ

‘ದೋಸ್ತಿ’ ಮನೆಗೆ: ಅಧಿಕಾರ ಬಿಎಸ್‌ವೈಗೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿ: ನೆಟ್ಟಿಗರ ಮನವಿ

ರೇವಣ್ಣನ ನಿಂಬೆಹಣ್ಣಿಗೆ ಯಾವುದೇ ಬೆಲೆ ಇಲ್ಲ: ಎ.ಮಂಜು

ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ: ಯಡಿಯೂರಪ್ಪ ಭರವಸೆ 

ವಿಶ್ವಾಸಮತ ನಿರ್ಣಯದ ಪರ 99, ವಿರುದ್ಧ 105: ಉರುಳಿತು ಮೈತ್ರಿ ಸರ್ಕಾರ 

ಅತ್ಯಂತ ಸಂತೋಷದಿಂದ ನಾನು ಈ ಸ್ಥಾನ ತ್ಯಜಿಸುತ್ತೇನೆ: ಸದನದಲ್ಲಿ ಎಚ್‌ಡಿಕೆ ಮಾತು

ದೇವೇಗೌಡರ ಕುಟುಂಬಕ್ಕೆ ತುಮಕೂರು ಜನರ ಶಾಪ ತಟ್ಟಿದೆ: ಸಂಸದ ಬಸವರಾಜು 

ಐಎಂಎ ಮನ್ಸೂರ್‌ಖಾನ್‌ನನ್ನು ಬಂಧಿಸಿದ್ದು ನಮ್ಮ ಎಸ್‌ಐಟಿ ಅಧಿಕಾರಿಗಳು: ಎಚ್‌ಡಿಕೆ  

ರಾಜೀನಾಮೆ ಪತ್ರವನ್ನು ಯಡಿಯೂರಪ್ಪಗೆ ತೋರಿಸಿದ ಸ್ಪೀಕರ್ ರಮೇಶ್‌ಕುಮಾರ್ 

ಪಾಕ್‌ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್

ಅತೃಪ್ತ ಶಾಸಕರ ಪರ ಸ್ಪೀಕರ್‌ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ

ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ 

ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ 

ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ 

ರಾಜೀನಾಮೆ ಕೊಟ್ಟವರಿಗೂ ವಿಪ್‌ ಅನ್ವಯ; ಸ್ಪೀಕರ್ ರೂಲಿಂಗ್ 

‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’ 

ದೇವರ ವರ: ಇಬ್ಬರು ಮುಖ್ಯಮಂತ್ರಿ– ಎಚ್‌ಡಿಕೆ–ಬಿಎಸ್‌ವೈಗೆ ದೇವರ ಹೂ ಪ್ರಸಾದ 

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು