ಗುರುವಾರ , ನವೆಂಬರ್ 14, 2019
19 °C

ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ ಅತೃಪ್ತ ಶಾಸಕರು

Published:
Updated:

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುತ್ತಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ನ 8 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಲು ವಿಧಾನಸೌಧದಿಂದ ರಾಜಭವನಕ್ಕೆ ತೆರಳಿದ್ದಾರೆ.

ಶನಿವಾರದ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 8 ಕ್ಕೂ ಹೆಚ್ಚು ಮಂದಿ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಲು ವಿಧಾನಸೌಧಕ್ಕೆ ಬಂದಿದ್ದರು. ಆದರೆ, ಕಚೇರಿಯಲ್ಲಿ ಸ್ಪೀಕರ್‌ ಕೆ.ಆರ್‌.ರಮೇಶ್‌ ಕುಮಾರ್ ಇರಲಿಲ್ಲ.

ಸ್ಪೀಕರ್‌ ಕಚೇರಿ ಒಳಗೆ ಹೋಗಿದ್ದ ಶಾಸಕರು ಹೊರಗೆ ಬಂದು ಅಲ್ಲಿಂದ, ರಾಜಭವನಕ್ಕೆ ತೆರಳಿದರು.

ಶಾಸಕರು ರಾಜೀನಾಮೆ ಸಲ್ಲಿಸಲು ಮುಂದಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಸಚಿವ ಡಿ.ಕೆ.ಶಿವಕುಮಾರ್‌ ತಮ್ಮ ಜನ ಸಂಪರ್ಕ ಸಭೆಯನ್ನು ರದ್ದುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ. ವಿಧಾನಸೌಧದಲ್ಲಿ ಅತೃಪ್ತ ಶಾಸಕರ ಮನವೊಲಿಕೆಗೆ ಕಸರತ್ತು ನಡೆಸಿದರು.

* ಇವನ್ನೂ ಓದಿ...

ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’

*  ಮದ್ದಿಲ್ಲದ ರೋಗ; ಮಧ್ಯಂತರ ರಾಗ​

ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್

ಪ್ರತಿಕ್ರಿಯಿಸಿ (+)