ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ರಾಜಕಾರಣದಲ್ಲೇನೇನಾಯ್ತು, ಮುಂದೇನಾಗಬಹುದು? ಇಲ್ಲಿದೆ ಸಮಗ್ರ ಅಪ್‌ಡೇಟ್ಸ್‌

ಶಾಸಕರ ನಡೆಗೆ ಸರ್ಕಾರ ಗಡಗಡ
Last Updated 6 ಜುಲೈ 2019, 19:34 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ 12 ಮಂದಿ ಶಾಸಕರು ರಾಜೀನಾಮೆ ಕೊಟ್ಟಿದ್ದು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿಯುವ ಆತಂಕ ಎದುರಿಸುತ್ತಿದೆ. ಇದರ ಬೆನ್ನಲ್ಲೇ ಶನಿವಾರ ತಡರಾತ್ರಿವರೆಗೂ ರಾಜ್ಯದಲ್ಲಿ ಹಲವು ರಾಜಕೀಯ ವಿದ್ಯಮಾನಗಳು ನಡೆದಿವೆ.

ರಾಜ್ಯ ರಾಜಕಾರಣದಲ್ಲಿ ಶನಿವಾರ ಏನೇನಾಯ್ತು? ಮುಂದೇನಾಗಬಹುದು? ಸುದ್ದಿ, ವಿಶ್ಲೇಷಣೆ ಸೇರಿದಂತೆ ಸಮಗ್ರ ಅಪ್‌ಡೇಟ್‌ ಇಲ್ಲಿದೆ:

ಶಾಸಕರ ನಡೆಗೆ ಸರ್ಕಾರ ಗಡಗಡ

https://bit.ly/2LBAZum

ರಾಜೀನಾಮೆ ಹಿಂಪಡೆಯುವಂತೆ ತಮ್ಮ ಪಕ್ಷದ ಶಾಸಕರ ಮನವೊಲಿಸಲು ಕಾಂಗ್ರೆಸ್‌ ರಾಜ್ಯ ನಾಯಕರು ನಡೆಸಿರುವ ಕೊನೆಯ ಕ್ಷಣದ ಕಸರತ್ತು ಫಲ ಕೊಟ್ಟಿಲ್ಲ. ಇನ್ನೂ 9 ಶಾಸಕರು ಸೋಮವಾರದ ವೇಳೆಗೆ ರಾಜೀನಾಮೆ ನೀಡಲಿದ್ದಾರೆ.

ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್‌

https://bit.ly/2NAERi3

ಶಾಸಕರ ರಾಜಿನಾಮೆ ಪತ್ರಗಳನ್ನು ಪಡೆದು ಅವರಿಗೆ ಸ್ವೀಕೃತಿ ಪತ್ರ ನೀಡುವಂತೆ ನಮ್ಮ ಕಚೇರಿಯ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ ಎಂದು ವಿಧಾನಸಭಾ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ತಿಳಿಸಿದ್ದಾರೆ.

ರಾಜ್ಯ ರಾಜಕೀಯ | ಗೋವಾ, ಮಹಾರಾಷ್ಟ್ರದ ರೆಸಾರ್ಟ್‌ನತ್ತ ರಾಜೀನಾಮೆ ನೀಡಿದ ಶಾಸಕರು​

https://bit.ly/2FXXOoF

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು, ಶನಿವಾರಸಂಜೆ ಗೋವಾ,ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.

ಖರ್ಗೆ ಹೆಗಲಿಗೆ ಸರ್ಕಾರ ಉಳಿಸುವ ಹೊಣೆ

https://bit.ly/2L6R2B8

ಕಾಂಗ್ರೆಸ್– ಜೆಡಿಎಸ್‌ ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿ ಉಂಟಾಗಿರುವ ಬೆಳವಣಿಗೆ ಆಧರಿಸಿ ಶನಿವಾರ ಸಂಜೆ ತುರ್ತು ಸಭೆ ನಡೆಸಿದ ಕಾಂಗ್ರೆಸ್‌ ಮುಖಂಡರು, ಸರ್ಕಾರ ಉಳಿಸುವ ಹೊಣೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಹಿಸಿದ್ದಾರೆ.

ಮತ್ತೆ 10 ಶಾಸಕರಿಂದ ರಾಜೀನಾಮೆ ಪರ್ವ?

https://bit.ly/2YyFPMG

ರಾಜ್ಯ ರಾಜಕೀಯ ವಲಯದಲ್ಲಿ ಗಂಟೆಗೊಂದು ಬೆಳವಣಿಗೆಗಳಾಗುತ್ತಿದ್ದು,ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 12 ಶಾಸಕರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ 10 ಮಂದಿ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಪರ್ವ | ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ: ಡಿ.ಕೆ.ಶಿವಕುಮಾರ್​

https://bit.ly/327tpxD

‘ಹೋಗುವವರನ್ನ ಹಿಡಿದುಕೊಳ್ಳಲು ಆಗಲ್ಲ. ಸಮಸ್ಯೆ ಇರಬಹುದು. ಆದ್ರೆ ಎಲ್ಲಾ ಸೆಟಲ್ ಆಗುತ್ತೆ. ರಾಜೀನಾಮೆಗೆ ಬೇಕಾದಷ್ಟು ಪ್ರೋಸಸ್ ಇದೆ. ನೋಡೋಣ’ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ರಾಜೀನಾಮೆ ನೀಡುತ್ತಿಲ್ಲ–ಸುಬ್ಬಾರೆಡ್ಡಿ ಸ್ಪಷ್ಟನೆ; ಪ್ರತಿಕ್ರಿಯೆಗೆ ಸಿಗದ ಸುಧಾಕರ್

https://bit.ly/2Xx31OU

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ಅವರು ಕೂಡ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು ಶನಿವಾರ ಹರಿದಾಡಿದ ವದಂತಿಯನ್ನು ಸುಬ್ಬಾರೆಡ್ಡಿ ಅವರು ಅಲ್ಲಗಳೆದರು.

ರಾಜೀನಾಮೆ ಸಲ್ಲಿಸಿದ ಕೆ.ಸಿ.ನಾರಾಯಣಗೌಡ ಮನೆಗೆ ಪೊಲೀಸ್ ಭದ್ರತೆ​

https://bit.ly/2Xvq5Oa

ಕೆ.ಆರ್‌.ಪೇಟೆ ಕ್ಷೇತ್ರದ ಜೆಡಿಎಸ್‌ ಶಾಸಕ ಕೆ.ಸಿ.ನಾರಾಯಣಗೌಡ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಜೆಡಿಎಸ್‌ ಕಾರ್ಯಕರ್ತರಗೆ ಆಘಾತ ತಂದಿದೆ. ರಾಜೀನಾಮೆ ಸುದ್ದಿ ಹರಡುತ್ತಿದ್ದಂತೆ ಪೊಲೀಸರು ಅವರ ಮನೆಗೆ ಭದ್ರತೆ ಒದಗಿಸಿದ್ದಾರೆ.

ಆಸರೆ ನೀಡಿದವರನ್ನೇ ಕೈಬಿಟ್ಟ ಅಡಗೂರು

https://bit.ly/2XsdrKV

‘ರಾಜಕೀಯ ಸಂಧ್ಯಾಕಾಲದಲ್ಲಿ ನನ್ನ ಕೈಹಿಡಿದು ಶಾಸಕರನ್ನಾಗಿ ಮಾಡಿದ್ದು ಎಚ್‌.ಡಿ.ದೇವೇಗೌಡ. ಅಂಥವರ ಕೈಬಿಟ್ಟು ಹೋದರೆ ಆ ದೇವರು ಮೆಚ್ಚುವನೇ?’ –ಹೀಗೆಂದು ಪದೇಪದೇ ಹೇಳುತ್ತಿದ್ದ ಹುಣಸೂರು ಕ್ಷೇತ್ರದ ಜೆಡಿಎಸ್‌ ಶಾಸಕ ಅಡಗೂರು ಎಚ್‌.ವಿಶ್ವನಾಥ್‌, ಈಗ ಆಸರೆ ನೀಡಿದವರಿಗೇ ಕೈಕೊಟ್ಟಿದ್ದಾರೆ.

ಸದ್ದಿಲ್ಲದೇ ಖೆಡ್ಡಾಕ್ಕೆ ಕೆಡವಿತೇ ಬಿಜೆಪಿ?

https://bit.ly/32dmnHu

ಶಾಸಕರನ್ನು ಸೆಳೆಯುವ ಬಗ್ಗೆ ಕೊನೆಯ ಹಂತದವರೆಗೂ ಗುಟ್ಟು ಬಿಟ್ಟುಕೊಡದ ಬಿಜೆಪಿ, ಮೈತ್ರಿ ಸರ್ಕಾರವನ್ನು ಸದ್ದಿಲ್ಲದೇ ಖೆಡ್ಡಾಕ್ಕೆ ಕೆಡಹುವ ಕಾರ್ಯತಂತ್ರ ರೂಪಿಸಿ ಮೊದಲ ಹಂತದ ಯಶ ಸಾಧಿಸಿದಂತೆ ಕಾಣುತ್ತಿದೆ.

ಕ್ಷಿಪ್ರ ಕ್ರಾಂತಿ ಹಿಂದೆ ಯಾರ ಕೈವಾಡ?

https://bit.ly/2LHgFI4

ರಾಜ್ಯದಲ್ಲಿ ಶನಿವಾರ ನಡೆದ ಕ್ಷಿಪ್ರ ಕ್ರಾಂತಿ ಹಿಂದೆ ಯಾರ ಕೈವಾಡ ಇದೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆದಿವೆ. ಬಿಜೆಪಿ ಜತೆಗೆ ಸಖ್ಯ ಇಟ್ಟುಕೊಂಡ ಕಾಂಗ್ರೆಸ್‌–ಜೆಡಿಎಸ್‌ನ ಅತೃಪ್ತ ಶಾಸಕರು ಮಾತ್ರ ರಾಜೀನಾಮೆ ಕೊಟ್ಟಿಲ್ಲ. ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಜತೆ ನಿಕಟ ಬಾಂಧವ್ಯ ಹೊಂದಿದ್ದ, ಅವರ ಹಿಂದೆ ಮುಂದೆ ಓಡಾಡಿಕೊಂಡಿದ್ದ ಶಾಸಕರು ರಾಜೀನಾಮೆ ಕೊಟ್ಟಿರುವುದು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ.

ರಾಜೀನಾಮೆ ಕೊಟ್ಟವರಿಗೆ ವಿಪ್ ಅನ್ವಯಿಸದು: ತಜ್ಞರು

https://bit.ly/2XPssdZ

ವಿಶ್ವಾಸಮತ ಸಾಬೀತುಪಡಿಸುವ ಸನ್ನಿವೇಶ ಸೃಷ್ಟಿಯಾದರೆ ಶಾಸಕರಿಗೆ ವಿಪ್ ಜಾರಿ ಮಾಡುವ ಅವಕಾಶ ಇಲ್ಲ ಹಾಗೂ ಸರ್ಕಾರ ಅಲ್ಪಮತದತ್ತ ಸಾಗಿರುವುದರಿಂದ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವ ದಾರಿಯೂ ಇಲ್ಲ ಎಂಬುದು ಕಾನೂನು ತಜ್ಞರ ಅಭಿಮತ.

ವಿಶ್ವಾಸ ಗಳಿಸುವಲ್ಲಿ ಸಿಎಂ ವಿಫಲ, 14 ಶಾಸಕರು ರಾಜೀನಾಮೆ ನೀಡಿದ್ದೇವೆ: ವಿಶ್ವನಾಥ್

https://bit.ly/2XufON9

‘ಸಮ್ಮಿಶ್ರ ಸರ್ಕಾರದ ಎರಡೂ ಪಕ್ಷಗಳ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಮುಖ್ಯಮಂತ್ರಿ ವಿಫಲರಾಗಿದ್ದಾರೆ. ಸರ್ಕಾರದ ಈ ಧೋರಣೆ ವಿರೋಧಿಸಿ ಎರಡೂ ಪಕ್ಷಗಳ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದೇವೆ’ ಎಂದು ಶಾಸಕ ಎಚ್.ವಿಶ್ವನಾಥ್ಸ್ಪಷ್ಟಪಡಿಸಿದ್ದಾರೆ.

ಪ್ರತಿ ಆಪರೇಷನ್‌ ನಡೆಸಲು ಸಜ್ಜಾದ ದಳ ಪಡೆ?

https://bit.ly/32fwRWK

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಬಿಜೆಪಿ ಶಾಸಕರ ಪ್ರತಿ ಆಪರೇಷನ್ ಹಾಗೂ ಎಲ್ಲ ಸಚಿವರ ರಾಜೀನಾಮೆ ಕೊಡಿಸಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಜೆಡಿಎಸ್‌ ವರಿಷ್ಠರು ಆಲೋಚಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT