ಮಂಗಳವಾರ, ಆಗಸ್ಟ್ 3, 2021
27 °C

ಸಿದ್ದರಾಮಯ್ಯ ಅವರದ್ದು ಹಿಟ್‌ ಅಂಡ್‌ ರನ್‌ ಕೆಲಸ: ವಿ.ಸೋಮಣ್ಣ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ‘ವಿಧಾನಸಭೆಯ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರದ್ದು ಹಿಟ್‌ ಅಂಡ್‌ ರನ್‌ ಕೆಲಸ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಯಾಪೈಸೆ ಅಕ್ರಮ ನಡೆದಿಲ್ಲ’ ಎಂದು ವಸತಿ ಸಚಿವ ವಿ.ಸೋಮಣ್ಣ ಇಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ವಿರೋಧ ಪಕ್ಷದ ಮುಖಂಡರ ಸಭೆ ಕರೆದಿದ್ದರು. ಅವ್ಯವಹಾರದ ದಾಖಲೆ ಸಲ್ಲಿಸಿ ಎಂದೂ ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರೂ ಐದು ವರ್ಷಗಳ ಕಾಲ ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಆರೋಪ ಮಾಡಿ ಪಲಾಯನ ಮಾಡುವುದು ಸರಿಯಲ್ಲ. ದಾಖಲೆಗಳಿದ್ದರೆ ಮುಖ್ಯಮಂತ್ರಿಗೆ ಕೊಡಲಿ’ ಎಂದು ಸವಾಲು ಹಾಕಿದರು.

‘ವೈದ್ಯಕೀಯ ಉಪಕರಣಗಳ ಖರೀದಿಗೆ ಸಾವಿರಾರು ಕೋಟಿ ರೂಪಾಯಿಯನ್ನೇ ಖರ್ಚು ಮಾಡಿಲ್ಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು